More

    ಶಿವಾಜಿ ಜಯಂತಿ ನಿಮಿತ್ತ ಸಾಗರದಲ್ಲಿ ಬೃಹತ್ ಶೋಭಾಯಾತ್ರೆ

    ಸಾಗರ: ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತ್ಯುತ್ಸವದ ಅಂಗವಾಗಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳದಿಂದ ಗುರುವಾರ ಸಂಜೆ ಬೃಹತ್ ಹಿಂದು ಸಾಮ್ರಾಜ್ಯೋತ್ಸವ ಆಯೋಜಿಸಲಾಗಿತ್ತು. ಶಿವಾಜಿ ಮಹಾರಾಜರ ಆಕರ್ಷಕ ಪ್ರತಿಮೆ ಶೋಭಾಯಾತ್ರೆಗೆ ಪ್ರಮುಖ ಆಕರ್ಷಣೆಯಾಗಿತ್ತು. ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಹಿಂದುಪರ ಸಂಘಟನೆಗಳ ಕಾರ್ಯಕರ್ತರ ಜಯಘೋಷ ಮುಗಿಲು ಮುಟ್ಟಿತ್ತು. ಶೋಭಾಯಾತ್ರೆಯ ರಂಗು ದುಪ್ಪಟ್ಟುಗೊಂಡಿತ್ತು.

    ಮಹಾಗಣಪತಿ ದೇವಸ್ಥಾನದಿಂದ ಆರಂಭವಾದ ಶೋಭಾಯಾತ್ರೆಯು ಚಂಡೆ ಮುಂತಾದ ವಾದ್ಯಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳ ಕಾರ್ಯಕರ್ತರು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದರು.
    ಧರ್ಮ ಪರಿಪಾಲಕ: ತದನಂತರ ಗಾಂಧೀ ಮೈದಾನದಲ್ಲಿ ಆಯೋಜಿಸಿದ್ದ ಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಧರ್ಮಸ್ಥಳದ ಶ್ರೀರಾಮ ಕ್ಷೇತ್ರದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕಾದದ್ದು ತಾಯಂದಿರ ಕರ್ತವ್ಯ. ಶಿವಾಜಿ ಮಹಾರಾಜರು ಹಿಂದು ಸಾಮ್ರಾಜ್ಯವನ್ನು ಕಟ್ಟಿದರಲ್ಲದೆ ಧರ್ಮವನ್ನು ಕಾಪಾಡಿದರು. ಯುವ ಜನರು ಧಾರ್ಮಿಕ ವಿಚಾರಧಾರೆಗಳಿಂದ ದೂರವಾಗುತ್ತಿದ್ದಾರೆ. ಸಂಸ್ಕೃತಿಯ ಮಹತ್ವ ತಿಳಿಸುವ ಇಂತಹ ಕಾರ್ಕ್ರಮಗಳನ್ನು ಯುವಜನರಲ್ಲಿ ಆಸಕ್ತಿ ಮೂಡಿಸುತ್ತವೆ ಎಂದರು.
    ದಿಕ್ಸೂಚಿ ಭಾಷಣ ಮಾಡಿದ ದಕ್ಷಿಣ ಪ್ರಾಂತ ಗೋರಕ್ಷಾ ಪ್ರಮುಖ್ ಮುರುಳಿಕೃಷ್ಣ ಮಾತನಾಡಿ, ಹಿಂದು ಎಂದು ಹೇಳಿಕೊಳ್ಳುವುದೇ ನಮಗೆ ಹೆಮ್ಮೆ ಎನ್ನಿಸುತ್ತದೆ. ನಿರಂತರ ಹೋರಾಟ ನಮ್ಮ ಕಾರ್ಯಕರ್ತರ ತ್ಯಾಗ, ಬಲಿದಾನದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ ಎಂದು ಹೇಳಿದರು.
    ನಾವು ಯಾವ ಪರಿಸ್ಥಿಯಲ್ಲಿದ್ದೇವೆ ಎಂದರೆ ನಮ್ಮ ದೇಶದಲ್ಲಿ ನಮ್ಮ ಧರ್ಮದ ಬಗ್ಗೆ ಮಾತನಾಡುವವರ ಮೇಲು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಇದಕ್ಕೆ ಕರ್ನಾಟಕವೇ ಪ್ರಮುಖ ಉದಾಹರಣೆ. ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಹಿಂದುಗಳ ಮೇಲೆ ನಡೆದ ಹಲ್ಲೆಯನ್ನು ಜನತೆ ಇನ್ನು ಮರೆತಿಲ್ಲ. ಶಂಕಿತ ಉಗ್ರರು ಶಿವಮೊಗ್ಗ ಮತ್ತು ಕರಾವಳಿ ಭಾಗದವರಾಗಿ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನುವ ವಿಚಾರಗಳು ಹೊರಬರುತ್ತಿರುವುದು ಜನರಲ್ಲಿ ಭೀತಿ ಮತ್ತು ಅಭದ್ರತೆಯನ್ನು ಸೃಷ್ಟಿಸುತ್ತಿದೆ. ಧರ್ವ ರಕ್ಷಣೆಯಲ್ಲಿ ಹಿಂದಿನಿಂದಲೂ ನಮ್ಮ ಸಾಧು, ಸಂತರು ಕಟಿಬದ್ಧರಾಗಿ ತೊಡಗಿಸಿಕೊಂಡಿದ್ದಾರೆ. ಶಿವಾಜಿ ಮಹಾರಾಜರು ಹಿಂದು ಧರ್ಮದ ಉಳಿವಿಗೆ ಮತ್ತು ನಮ್ಮ ಸಂಸ್ಕೃತಿಯ ಮಹತ್ವವನ್ನು ಪರಿಚಯಿಸುವಲ್ಲಿ ಅವರು ಕೈಗೊಂಡ ಕಾರ್ಯಗಳು ಇಂದಿಗೂ ಚಿರಸ್ಥಾಯಿ. ಇಂತಹ ಕಾರ್ಯಕ್ರಮಗಳಲ್ಲಿ ನಾವೆಲ್ಲರೂ ಹೆಚ್ಚು ತೊಡಗಿಕೊಳ್ಳೋಣ ಎಂದರು.

    ರಾಜಕಾರಣಿಗಳ ದಂಡು
    ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಗರದ ಅಂಬೇಡ್ಕರ್ ವೃತ್ತದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಸಾಗರ ಹೋಟೆಲ್ ವೃತ್ತದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾಲಾರ್ಪಣೆ ಮಾಡಿದರೆ, ಅಲ್ಲಿಯೇ ಇದ್ದ ಮಾಜಿ ಸಜಿವ ಹರತಾಳು ಹಾಲಪ್ಪ ಕೂಡಾ ಮಾಲಾರ್ಪಣೆ ಮಾಡಿದರು. ಈ ವೇಳೆ ಎರಡೂ ಕಡೆಯ ಬೆಂಬಲಿಗರು ಘೋಷಣೆ ಕೂಗಿ ತಮ್ಮ ಬಲಾ ಬಲ ಪ್ರದರ್ಶಿಸಿದರು. ಈ ಸಂದರ್ಭಲ್ಲಿ ಮುಖಾಮುಖಿಯಾದ ಕೆ.ಎಸ್.ಈಶ್ವರಪ್ಪ ಮತ್ತು ಹಾಲಪ್ಪ ಪರಸ್ಪರ ಕೈ ಕುಲುಕಿ ಉಭಯ ಕುಶಲೋಪರಿ ವಿಚಾರಿಸಿದರು. ಇದು ನೆರೆದಿದ್ದವರ ಅಚ್ಚರಿಗೆ ಕಾರಣವಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts