More

    ಹೊರಗೆ ಸಮಾಜ ಸೇವೆ, ಒಳಗೆ ವೇಶ್ಯಾವಾಟಿಕೆ… ಮಂಗಳೂರಲ್ಲಿ ಕೊನೆಗೂ ಸಿಕ್ಕಬಿದ್ದ ಕಾಮುಕ!

    ಮಂಗಳೂರು: ನಗರದ ನಂದಿಗುಡ್ಡೆಯ ಫ್ಲ್ಯಾಟ್‌ವೊಂದರಲ್ಲಿ ನಡೆಯುತ್ತಿದ್ದ ಅಪ್ರಾಪ್ತ ಬಾಲಕಿಯರ ಹಾಗೂ ಯುವತಿಯರ ಮಾನವ ಕಳ್ಳ ಸಾಗಾಣಿಕೆ, ವೇಶ್ಯಾವಾಟಿಕೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ 16ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಸಮಾಜ ಸೇವೆ ಸೋಗಲ್ಲಿ ಓಡಾಡುತ್ತಿದ್ದ ಈತ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಹೀನ ಕೃತ್ಯ ವೆಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.

    ಉಳ್ಳಾಲ ನಿವಾಸಿ ಅಬ್ದುಲ್ ರಾಝೀಕ್ ಬಂಧಿತ ಆರೋಪಿ. ಇಬ್ಬರು ಅಪ್ರಾಪ್ತ ಬಾಲಕಿಯವರು ನೀಡಿದ ದೂರಿನಂತೆ ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದು, ಅಪ್ರಾಪ್ತ ಬಾಲಕಿಯರಿಗೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಬ್ದುಲ್ ರಾಝೀಕ್​ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಮಾಜ ಸೇವಕನಾಗಿ ಗುರುತಿಸಿಕೊಂಡಿದ್ದ ಈ ಹಿಂದೆ ಈತನಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೂ ಒಲಿದಿತ್ತು. ಇದೀಗ ಈತನ ಅಸಲಿ ಮುಖ ಅನಾವರಣಗೊಂಡಿದೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಆರೋಪಿ ರಾಝೀಕ್ ಎನ್​ಜಿಒವೊಂದರ ಮೂಲಕ ಸಮಾಜ ಸೇವೆ ಮಾಡುತ್ತಿರುವುದಾಗಿ ಮೇಲ್ನೋಟಕ್ಕೆ ಗುರುತಿಸಿಕೊಂಡಿದ್ದ. ಗಣ್ಯವ್ಯಕ್ತಿಗಳ ಜತೆ ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದ. ಕಮೀಷನರ್ ಕಚೇರಿಗೂ ಭೇಟಿ ನೀಡಿ ನನ್ನ ಜತೆಯೂ ಫೋಟೋ ತೆಗೆಸಿಕೊಂಡಿದ್ದ. ಮಾನವ ಕಳ್ಳ ಸಾಗಾಣಿಕೆ, ವೇಶ್ಯಾವಾಟಿಕೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಮಂಗಳೂರಿಗೆ ವಾಪಸ್​ ಆಗುತ್ತಿದ್ದಂತೆ ಆತನನ್ನು ಬಂಧಿಸಿದ್ದೇವೆ. ಬಾಲಕಿ ಮೇಲೆ ಅತ್ಯಾಚಾರ ಮಾಡಿರೋದಕ್ಕೆ ಸಾಕ್ಷ್ಯಾಧಾರಗಳು ಸಿಕ್ಕಿವೆ. ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ತನಿಖೆ ಮುಂದುವರಿಸಿದ್ದೇವೆ ಎಂದರು.

    ಈತ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16ನೇ ಆರೋಪಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿದ್ದು, ಎಲ್ಲ ಆರೋಪಿಗಳೂ ನ್ಯಾಯಾಂಗ ಬಂಧನದಲ್ಲಿದ್ದಾರ.

    ಕೆಎಸ್ಸಾರ್ಟಿಸಿ-ಕಾರಿನ​ ನಡುವೆ ಭೀಕರ ಅಪಘಾತ: 5 ವಿದ್ಯಾರ್ಥಿಗಳು ದುರ್ಮರಣ, ಸಾವಲ್ಲೂ ಒಂದಾದ ಸ್ನೇಹಿತರು…

    ಕೆಎಸ್ಸಾರ್ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts