ಮೈಸೂರಲ್ಲಿ ಗ್ಯಾಂಗ್​ ರೇಪ್​: ಬೀದಿಗಿಳಿದು ವಿದ್ಯಾರ್ಥಿಗಳ ಪ್ರತಿಭಟನೆ

student protest
Published on

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಈ ಪೈಶಾಚಿಕ ಕೃತ್ಯ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದು, ಅತ್ತ ಈ ಘಟನೆ ಖಂಡಿಸಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಮುಕರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಮೈಸೂರು ನಗರದ ರಾಮಸ್ವಾಮಿ ವೃತ್ತದ ಬಳಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಹೊರ ವಲಯಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಹೆಣ್ಣ ಮಕ್ಳಳಿಗೆ ಪೊಲೀಸರು ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಕಲಬುರಗಿಯಲ್ಲೂ ಪ್ರತಿಭಟನೆ ನಡೆಯಿತು. ಕಲಬುರಗಿ ನಗರದ ಎಸ್​ವಿಪಿ ವೃತ್ತದಲ್ಲಿ ನಾಲ್ಕು ಚಕ್ರ ತಂಡದ ಸದಸ್ಯರು ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಅತ್ಯಾಚಾರಿಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net