ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ಪೂರ್ಣಪೀಠ ಶುಕ್ರವಾರ ಮಧ್ಯಂತರ ಆದೇಶ ಪ್ರಕಟಿಸಿದೆ. ಲಿಖಿತರೂಪದಲ್ಲಿ ಪ್ರಕಟಿಸಿದ ಆದೇಶ ಪತ್ರಿ ವಿಜಯವಾಣಿಗೆ ಲಭ್ಯವಾಗಿದೆ.
ತರಗತಿಯೊಳಗೆ ಧರ್ಮಾನುಸಾರ ಕೇಸರಿ ಶಾಲು, ಸ್ಕಾರ್ಫ್, ಹಿಜಾಬ್, ಧಾರ್ಮಿಕ ಬಾವುಟಗಳನ್ನು ನಿರ್ಬಂಧಿಸಲಾಗುತ್ತಿದೆ. ಇವುಗಳನ್ನು ತರಗತಿಯೊಳಗೆ ವಿದ್ಯಾರ್ಥಿಗಳು ತರಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ಹಿಜಾಬ್ ಕುರಿತು ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಶಿಕ್ಷಣ ಸಂಸ್ಥೆಗಳ ಬಂದ್ ನೋವಿನ ಸಂಗತಿ. ನಮ್ಮದು ಬಹು ಸಂಸ್ಕೃತಿ, ಧರ್ಮ ಹಾಗೂ ಭಾಷೆ ಹೊಂದಿರುವ ರಾಷ್ಟ್ರ. ಪ್ರತಿ ನಾಗರಿಕನಿಗೂ ಅವನಿಚ್ಛೆಯ ಧರ್ಮ ಆಚರಿಸುವ ಹಕ್ಕಿದೆ. ಈ ಹಕ್ಕು ಪರಿಪೂರ್ಣವಲ್ಲ, ಅದಕ್ಕೂ ಕೆಲ ನಿರ್ಬಂಧಗಳಿವೆ. ತರಗತಿಗಳಲ್ಲಿ ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಧಾರ್ಮಿಕ ಆಚರಣೆಯೇ? ಇದು ಸಂವಿಧಾನದ ವ್ಯಾಪ್ತಿಯಲ್ಲಿ ಬರುವುದೇ? ಈ ಬಗ್ಗೆ ಆಳವಾಗಿ ಪರಿಶೀಲನೆ ನಡೆಸಬೇಕಿದೆ. ನಾಗರಿಕ ಸಮಾಜದಲ್ಲಿ ಧರ್ಮ, ಸಂಸ್ಕೃತಿ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವುದು ಸರಿಯಲ್ಲ. ಇದರಿಂದ ಶೈಕ್ಷಣಿಕ ಸಂಸ್ಥೆಗಳು ಮುಚ್ಚಲ್ಪಟ್ಟಿರುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣವನ್ನು ತುರ್ತಾಗಿ ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ಪೂರ್ಣಪೀಠ ತಿಳಿಸಿದೆ.
ಪ್ರತಿಭಟನೆಗಳಿಂದ ಶಾಲಾ-ಕಾಲೇಜುಗಳು ಬಂದ್ ಆಗಬಾರದು. ಪ್ರಸಕ್ತ ಶೈಕ್ಷಣಿಕ ವರ್ಷ ಇನ್ನೇನು ಮುಕ್ತಾಯವಾಗಲಿದೆ. ಶೈಕ್ಷಣಿಕ ವರ್ಷ ವಿಳಂಬವಾದರೆ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆ ತರಲಿದೆ. ಉನ್ನತ ಶಿಕ್ಷಣದ ಕೋರ್ಸ್ಗಳ ಪ್ರವೇಶಕ್ಕೆ ಈಗಾಗಲೇ ಸಮಯ ನಿಗದಿಯಾಗಿರುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳನ್ನು ತೆರೆದು ತರಗತಿಗಳಿಗೆ ಹಾಜರಾಗಲು ಈ ಸಂಬಂಧ ಸರ್ಕಾರ ಹಾಗೂ ಸಂಬಂಧಪಟ್ಟವರು ಅವಕಾಶ ನೀಡಬೇಕು. ಮುಂದಿನ ಆದೇಶದವರೆಗೆ ತರಗತಿಯೊಳಗೆ ಧರ್ಮಾನುಸಾರ ಕೇಸರಿ ಶಾಲು, ಸ್ಕಾರ್ಫ್, ಹಿಜಾಬ್, ಧಾರ್ಮಿಕ ಬಾವುಟಗಳನ್ನು ನಿರ್ಬಂಧಿಸಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ಈ ಆದೇಶವು ಈಗಾಗಲೇ ಕಾಲೇಜು ಅಭಿವೃದ್ಧಿ ಸಮಿತಿಗಳು ವಸ್ತ್ರಸಂಹಿತೆ ಅಥವಾ ಸಮವಸ್ತ್ರ ನಿಗದಿಪಡಿಸಿದ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ. ಈ ಪ್ರಕರಣದ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಲಾಗಿದೆ.
ಹಿಜಾಬ್ ವಿವಾದ: ಸ್ಫೋಟಕ ರಹಸ್ಯ ಬಯಲು, ಎರಡು ತಿಂಗಳ ಹಿಂದೆಯೇ ನಡೆದಿತ್ತು ಮಾಸ್ಟರ್ ಪ್ಲ್ಯಾನ್…
ಯೋಗ ಕ್ಲಾಸ್ನಲ್ಲಿ ಪರಪುರಷನ ಜತೆ ಲವ್ವಿಡವ್ವಿ! ಪತ್ನಿಯ ಈ ಅಸಹ್ಯ ಗಂಡನಿಗೆ ತಿಳಿಯುವ ಮುನ್ನವೇ ಘೋರ ದುರಂತ