ಆರೋಪ ಕೇಳಿಬಂದ ಬೆನ್ನಲ್ಲೇ ಐಪಿಎಸ್​ ಅಧಿಕಾರಿ ನಿಶಾ ಜೇಮ್ಸ್​ ವರ್ಗಾವಣೆ

nisha james
Published on

ಬೆಂಗಳೂರು: ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್​ ಅವರನ್ನ ಆಂತರಿಕ ಭದ್ರತಾ ವಿಭಾಗಕ್ಕೆ ಎತ್ತಂಗಡಿ ಮಾಡಲಾಗಿದೆ.

ಐಪಿಎಸ್​ ಅಧಿಕಾರಿ ನಿಶಾ ಜೇಮ್ಸ್ ವಿರುದ್ಧ ಕೆಲ ಸಿಬ್ಬಂದಿಗಳು ಆರೋಪಿಸಿ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ನಿಶಾ ಜೇಮ್ಸ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್​ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ನಿಶಾ ಅವರಿಂದ ತೆರವಾದ ಸ್ಥಾನಕ್ಕೆ ಬಿ.ಎಂ. ಲಕ್ಷ್ಮೀಪ್ರಸಾದ್ ಅವರನ್ನ ನೇಮಕ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net