More

    ಇಂದಿನಿಂದ 3 ದಿನ ಕರ್ನಾಟಕದ ಹಲವೆಡೆ ಮಳೆ! ತಮಿಳುನಾಡು, ಕೇರಳದಲ್ಲೂ ಮಳೆ

    ಬೆಂಗಳೂರು: ರಾಜ್ಯದ ಹಲವೆಡೆ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತವಾಗಿದ್ದು, ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಕೇರಳ ರಾಜ್ಯದಲ್ಲೂ ಎರಡು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಾ.7ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಾ.8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಕಡೆ ಮಳೆಯಾಗುವ ಮುನ್ಸೂಚನೆ ಇದೆ. ಪಶ್ಚಿಮ ಘಟ್ಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಾ.7,8,9ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಮುನ್ನವೇ ಬೇಸಿಗೆ ಶರುವಾಗಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿದ್ದು, ಜನರು ಬಿಸಿಲಿಂದ ಕಂಗೆಟ್ಟಿದ್ದಾರೆ. ಇದೀಗ ಮಳೆ ಬರುವ ಮುನ್ಸೂಚನೆ ಸಿಕ್ಕಿದೆ.

    ಇನ್ನು 2 ತಿಂಗಳು ಕಳೆದಿದ್ರೆ ಡಾಕ್ಟರ್ ಆಗಿ ತಾಯ್ನಾಡಿಗೆ ಬರ್ತಿದ್ದೆ.. ಭಾರತೀಯ ರಾಯಭಾರ ಕಚೇರಿಯವರೇ ಓಡಿ ಹೋಗಿದ್ದಾರೆ…

    4 ದಿನ ಸ್ನೇಹಿತನ ಶವ ಬಚ್ಚಿಟ್ಟು ನಾಟಕವಾಡಿದ್ದ! ​ಮಿಸ್ಸಿಂಗ್​ ಕೇಸ್​ ದಾಖಲಾಗ್ತಿದ್ದಂತೆ ನಡೆಯಬಾರದ್ದು ನಡೆದೇ ಹೋಯ್ತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts