ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಏ.17ರಂದು ಇಬ್ರಾಹಿಂ ಅಧಿಕಾರ ಸ್ವೀಕಾರ

ibrahim
Published on

ರಾಮನಗರ: ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.

ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು. ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net