

ಬೆಂಗಳೂರು: ಜೆಡಿಎಸ್ನ ಹಿರಿಯ ಮುಖಂಡ ಆರ್.ರತನ್ ಸಿಂಗ್ ಅವರು ಇಂದು(ಶನಿವಾರ) ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರತನ್ ಸಿಂಗ್ರ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, 'ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ಅವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ರತನ್ ಸಿಂಗ್ರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಮತ್ತು ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.