More

    ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ… ಆಸ್ಪತ್ರೆಯ ಬೆಡ್​ ಮೇಲೆ ಕುಳಿತುಕೊಂಡೇ ವಿಡಿಯೋ ಕಳಿಸಿದ ಪ್ರಭಾಕರ್​ ರೆಡ್ಡಿ

    ಬೆಂಗಳೂರು: ವಿಧಾನಸಭಾ ಚುನಾವಣೆಯ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್ ರೆಡ್ಡಿ ಮಂಗಳವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿದ್ದು, ಇದು ಸುಳ್ಳು ಸುದ್ದಿ ಎಂದು ಸ್ವತಃ ಪ್ರಭಾಕರ್​ ರೆಡ್ಡಿ ಅವರೇ ಆಸ್ಪತ್ರೆಯಲ್ಲಿ ಕುಳಿತು ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ.

    ರಾಜರಾಜೇಶ್ವರಿನಗರದ ತಮ್ಮ ನಿವಾಸದಲ್ಲಿ ಶೌಚಗೃಹ ಶುಚಿಗೊಳಿಸುವ ಪಿನಾಯಿಲ್ ಕುಡಿದು ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಸ್ಪರ್ಶ ಆಸ್ಪತ್ರೆಗೆ ಪತ್ನಿ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಲ್ಲೆಡೆ ಸುದ್ದಿ ಹಬ್ಬಿತ್ತು. ಇದನ್ನು ಅಲ್ಲಗೆಳೆದಿರುವ ಪ್ರಭಾಕರ್​ ರೆಡ್ಡಿ, ನನಗೆ ಕೋವಿಡ್​ ಬಂದಿದ್ದು, ಲನ್ಸ್​ಗೆ ಸೋಂಕು ತಗುಲಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಪಡೆಯುತ್ತಿದ್ದೇನೆ. ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ಅಂತಹ ದುಸ್ಥಿತಿ ನನಗೆ ಬಂದಿಲ್ಲ. ನಾನು ಆರಾಮಾಗಿದ್ದೇನೆ. ಚೆನ್ನಾಗಿದ್ದೇನೆ. ಆತ್ಮಹತ್ಯೆಯ ವದಂತಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿರಿ ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

    ಇತ್ತೀಚೆಗೆ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್​ ಪಕ್ಷ ಸೇರಿದ ಪ್ರಭಾಕರ ರೆಡ್ಡಿಯನ್ನು ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ದಕ್ಷಿಣ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಕರೊನಾ ಲಾಕ್​ಡೌನ್​ ವೇಳೆ ಕ್ಷೇತ್ರದ ಜನತೆಗೆ ದಿನಸಿ ಕಿಟ್ ವಿತರಣೆ ಮಾಡಿದ್ದರು.

    ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

    ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

    ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

    ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts