ವಾಟ್ಸ್​ಆ್ಯಪ್​ ಸ್ಟೇಟಸ್​ಗೆ ವಿವಾದಾತ್ಮಕ ವಿಡಿಯೋ ಹಾಕಿ ಗಲಭೆ ಸೃಷ್ಟಿಸಿದ್ದ ಆರೋಪಿಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ಕೋಮುಭಾವನೆಗೆ ದಕ್ಕೆ ತರುವ ಅನಿಮೇಟೆಟ್​ ವಿಡಿಯೋವನ್ನು ವಾಟ್ಸ್​ಆ್ಯಪ್​ ಸ್ಟೇಟಸ್​ಗೆ ಹಾಕಿಕೊಂಡು ಹುಬ್ಬಳ್ಳಿಯಲ್ಲಿ ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ ಹಿರೇಮಠನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಸೋಮವಾರ 4ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಆರೋಪಿ ಅಭಿಷೇಕನನ್ನು ಹಾಜರುಪಡಿಸಿದ್ದರು. ಏ.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಅಭಿಷೇಕ ಪರ‌ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 89 ಆರೋಪಿಗಳನ್ನು ಸೋಮವಾರ ಹುಬ್ಬಳ್ಳಿಯ ಕೋರ್ಟ್​ಗೆ ಹಾಜರು ಪಡಿಸಲಿದ್ದಾರೆ. ಅವಹೇಳನಕಾರಿ … Continue reading ವಾಟ್ಸ್​ಆ್ಯಪ್​ ಸ್ಟೇಟಸ್​ಗೆ ವಿವಾದಾತ್ಮಕ ವಿಡಿಯೋ ಹಾಕಿ ಗಲಭೆ ಸೃಷ್ಟಿಸಿದ್ದ ಆರೋಪಿಗೆ ನ್ಯಾಯಾಂಗ ಬಂಧನ