More

    ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್! ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ‌

    ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರದಿಂದ ಕಾಂಗ್ರೆಸ್ ಪಕ್ಷವನ್ನು ದೂರವಿಡಲು ಬಿಜೆಪಿ ನಿರ್ಧರಿಸಿದ್ದು, ಜೆಡಿಎಸ್ ಜತೆ ಮತ್ತೆ ದೋಸ್ತಿ ಮಾಡಿಕೊಳ್ಳಲು ಮುಂದಾಗಿದೆ.

    ಆರ್​ಟಿ‌ ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ವೇಳೆ ಔಪಚಾರಿಕವಾಗಿ ಚರ್ಚಿಸಿದ್ದು, ಒಂದಾಗಿ ಹೋಗುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು.

    ಉಭಯ ಪಕ್ಷಗಳು ಸ್ಥಳೀಯ ನಾಯಕರ ಜತೆಗೆ ಚರ್ಚಿಸಿದ ನಂತರ ಮುಂದಿನ ಹೆಜ್ಜೆ ಇರಿಸಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟವೇ ಕಲಬುರಗಿ ಪಾಲಿಕೆ ಆಡಳಿದ ಚುಕ್ಕಾಣಿ ಹಿಡಿಯಲಿದೆ ಎಂದು ಬೊಮ್ಮಾಯಿ‌ ಸುಳಿವು ನೀಡಿದರು.

    ನಡ್ಡಾ ಭೇಟಿ ಸಾಧ್ಯತೆ: ದೆಹಲಿ ಪ್ರವಾಸದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಗಳ ಮದುವೆಯ ಆರತಕ್ಷತೆಗೆ ಹಾಜರಾಗಲಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಸಚಿವ ಸಂಪುಟದ ನಾಲ್ಕು ಸ್ಥಾನಗಳ ಭರ್ತಿ, ನಿಗಮ-ಮಂಡಳಿ ಅಧ್ಯಕ್ಷರ ಬದಲಾವಣೆ ವಿಷಯ ಈ ಬಾರಿ ಚರ್ಚಿಸುವುದಿಲ್ಲ ಎಂದು ಬೊಮ್ಮಾಯಿ‌ ಸ್ಪಷ್ಟಪಡಿಸಿದರು.

    ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಪ್ರಾಣಬಿಟ್ಟ ಗರ್ಭಿಣಿ! ಮನಕಲಕುತ್ತೆ ಸಾವಿನ ಕಾರಣ

    ಅಶ್ಲೀಲ ಚಿತ್ರ ತೋರಿಸಿ ಅದರಂತೆ ಸಹಕರಿಸು ಎಂದು ಹಿಂಸಿಸ್ತಾನೆ, ನನ್ನ ಗಂಡನ ಕಿರುಕುಳ ಸಹಿಸಲಾಗ್ತಿಲ್ಲ…

    ವಿಪ್​ ಉಲ್ಲಂಘನೆ: ಕೊಳ್ಳೇಗಾಲ ನಗರಸಭೆಯ 7 ಸದಸ್ಯರು ಅನರ್ಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts