ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಕಾರ್ಯದರ್ಶಿ ಅಧಿಕಾರ ಸ್ವೀಕಾರ

kkrdb venkatesh kumar
Published on

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್​ಡಿಬಿ)ಯ ನೂತನ ಕಾರ್ಯದರ್ಶಿಯಾಗಿ ಆರ್. ವೆಂಕಟೇಶ್​ಕುಮಾರ್ ಮಂಗಳವಾರ ಕಲಬುರಗಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಮಂಡಳಿಯು ಅಸ್ತಿತ್ವಕ್ಕೆ ಬಂದ 7 ವರ್ಷಗಳ ಬಳಿಕ ಪೂರ್ಣಪ್ರಮಾಣದ ಕಾರ್ಯದರ್ಶಿಯನ್ನು ರಾಜ್ಯ ಸರ್ಕಾರ ನೇಮಕ ಮಾಡಿದಂತಾಗಿದೆ. ಇದುವರೆಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರೇ ಮಂಡಳಿಯ ಕಾರ್ಯದರ್ಶಿ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಸೆ.17ರಂದು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಕೆಆರ್​ಡಿಬಿಗೆ ಶಾಶ್ವತ ಕಾರ್ಯದರ್ಶಿ ನೇಮಿಸುವ ಭರವಸೆ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net