ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು

asi death
Published on

ಕಾರವಾರ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಸಂಚಾರಿ ಠಾಣೆ ಎಎಸ್​ಐ ಅಬ್ದುಲ್ ಖಾದರ್ ಶೇಖ್(58) ಮೃತರು. ಪೊಲೀಸ್​ ಠಾಣೆ ಆವರಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಅವರೇ ಕಮಾಂಡ್ ನೀಡಿದ್ದರು. ಇದಾದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದರು. ಕೂಡಲೇ ಅವರನ್ನು ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಾರವಾರ ಮೂಲದ ಅಬ್ದುಲ್ ಖಾದರ್ ಶೇಖ್ ಅವರು 1992ರಲ್ಲಿ ಕಾನ್ಸ್​ಟೇಬಲ್​ ಆಗಿ ಪೊಲೀಸ್​ ಇಲಾಖೆಗೆ ಸೇರಿದ್ದರು. ಕುಮಟಾ, ದಾಂಡೇಲಿ, ಜೊಯಿಡಾ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. 2019ರ ಜುಲೈನಲ್ಲಿ ಎಎಸ್​ಐ ಆಗಿ ಬಡ್ತಿಯಾಗಿ ಕಾರವಾರ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net