ಪುನೀತ್​ ರಾಜ್​​ಕುಮಾರ್​ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

1190470
Published on

ಬೆಂಗಳೂರು: ಚಂದನವನದ 'ರಾಜಕುಮಾರ', ಕೋಟ್ಯಂತರ ಅಭಿಮಾನಿಗಳ ಪಾಲಿನ ಪ್ರೀತಿಯ ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ಒಲಿದಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್​ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದರು.

ಡಾ.ರಾಜ್​ಕುಮಾರ್​ ಅವರ ಸ್ಮಾರಕದಂತೆ ಪುನೀತ್​ ಅವರ ಸ್ಮಾರಕ ನಿರ್ಮಾಣ ಮಾಡುವುದಾಗಿ ಇದೇ ವೇಳೆ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು. ಪುನೀತ್​ಗೆ 'ಕರ್ನಾಟಕ ರತ್ನ' ಪ್ರಶಸ್ತಿ ಕೊಡುವುದಾಗಿ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಗಣ್ಯರು ಎದ್ದು ನಿಂತು ಚಪ್ಪಾಳೆಯ ಸುರಿಮಳೆಗೈದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net