More

    ವಿಧಾನ ಪರಿಷತ್​ನ​ 25 ಸ್ಥಾನಗಳಿಗೆ ಚುನಾವಣೆ ಘೋಷಣೆ​: ಡಿ.10 ರಂದು ಮತದಾನ

    ಬೆಂಗಳೂರು: ಹಾನಗಲ್​ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಇದೀಗ ವಿಧಾನ ಪರಿಷತ್​ ಚುನಾವಣೆಗೆ ಸಜ್ಜಾಗಬೇಕಿದೆ. ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ವೇಳಾಪಟ್ಟಿಯನ್ನು ಮಂಗಳವಾರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

    ನಾಮಪತ್ರ ಸಲ್ಲಿಕೆಗೆ ಕೊನೇ ದಿನ ನವೆಂಬರ್​ 23. ನ.24ರಂದು ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಗೆ ನ.26 ಕೊನೇ ದಿನ. ಡಿಸೆಂಬರ್​ 10ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಡಿ.14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

    ವಿಧಾನ ಪರಿಷತ್​ಗೆ ಆಯ್ಕೆಯಾದ 25 ಸದಸ್ಯರ ಅವಧಿ 2022ರ ಜನವರಿ 5ಕ್ಕೆ ಪೂರ್ಣಗೊಳ್ಳಲಿದೆ. ಈ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬೀದರ್​ನಲ್ಲಿ 1 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಅದೇ ರೀತಿ ಕಲಬುರಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಕ್ಷೇತ್ರಕ್ಕೆ, ಚಿಕ್ಕಮಗಳೂರಲ್ಲಿ 1, ಹಾಸನ 1, ತುಮಕೂರು 1, ಮಂಡ್ಯ 1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1, ಕೊಡಗು 1, ಮೈಸೂರು ಜಿಲ್ಲೆಯಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

    ಪುನೀತ್​ ಆತ್ಮದ ಜತೆ ಮಾತಾಡಿದ್ದಾಗಿ ವಿಡಿಯೋ ಹಂಚಿಕೊಂಡ ಚಾರ್ಲಿ: ಆ ದೃಶ್ಯ ನೋಡುತ್ತಲೇ ಅಪ್ಪು ಅಭಿಮಾನಿಗಳ ಕಣ್ಣು ಕೆಂಪಾಯ್ತು…

    ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರೆ ಪುನೀತ್​ ಸಾಯುತ್ತಿರಲಿಲ್ಲ… ಸ್ಲೋ ಪಾಯಿಸನ್​ ಕುರಿತು ಜನರಿಗೆ ಸತ್ಯ ತಿಳಿಸಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts