More

    ಬದುಕಿನ ಮೌಲ್ಯ ಕಲಿಸಿದ ಕಾಯಕಯೋಗಿ

    ವಿಜಯಪುರ: ತ್ರಿವಿಧ ದಾಸೋಹದ ಮೂಲಕ ಎಲ್ಲರ ಮನಗೆದ್ದು, ಅಸಂಖ್ಯಾತ ಮಕ್ಕಳ ಭವಿಷ್ಯ ರೂಪಿಸಿದ ಶಿವಕುಮಾರ ಶ್ರೀಗಳು ನಡೆದಾಡುವ ದೇವರಾಗಿದ್ದರು ಎಂದು ಸಾಹಿತಿ ಸಂತೋಷ ಬಂಡೆ ಹೇಳಿದರು.

    ತಾಲೂಕಿನ ನಾಗಠಾಣ ಗ್ರಾಮದಲ್ಲಿ ಸೋಮವಾರ ನಡೆದ ಲಿಂ. ಡಾ. ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

    ಅಕ್ಷರ ಜ್ಞಾನದ ಜತೆಗೆ ಬದುಕಿಗೆ ಅಗತ್ಯವಾದ ಮೌಲ್ಯವನ್ನು ಸ್ವಾಮೀಜಿ ಮಕ್ಕಳಿಗೆ ಕಲಿಸಿದ್ದಾರೆ. ಮಠದ ತೋಟಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಯ ಕಾರ್ಯಗಳ ಮೂಲಕ ಮಕ್ಕಳಲ್ಲಿ ಕಾಯಕ ಮತ್ತು ಶ್ರಮ ಸಂಸ್ಕೃತಿಯ ಪಾಠವನ್ನು ಪ್ರಾಯೋಗಿಕವಾಗಿ ಹೇಳಿಕೊಟ್ಟಿದ್ದಾರೆ ಎಂದರು.

    ಪಿಕೆಪಿಎಸ್ ನಿರ್ದೇಶಕ ಪ್ರಭಾಕರ ಅರಕೇರಿ ಮಾತನಾಡಿ, ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರು ಹಾಕಿಕೊಟ್ಟ ಮಾರ್ಗ ಮತ್ತು ತೋರಿದ ದಾರಿ ಅನುಪಮವಾದದ್ದು. ಅತ್ಯಂತ ಸರಳ ಹಾಗೂ ಸಾರ್ಥಕತೆಯ ಬದುಕು ನಡೆಸಿದ ಅವರ ಜೀವನ ಎಲ್ಲರಿಗೂ ಸ್ಫೂರ್ತಿದಾಯಕ ಎಂದು ತಿಳಿಸಿದರು.

    ಚಂದ್ರಕಾಂತ ಬಿರಾದಾರ ಮಾತನಾಡಿದರು. ಗ್ರಾಮದ ಹಣಮಂತ ಹಂಡಿ, ಚಂದು ರೂಗಿ, ಹಣಮಂತ ಬಗಲಿ, ಶ್ರೀಶೈಲ ರಾಂಪುರ, ಮಲ್ಲಿಕಾರ್ಜುನ ಶಿರಕನಹಳ್ಳಿ, ರಮೇಶ ಮಸಳಿ, ಮಲ್ಲಿಕಾರ್ಜುನ ಸಮಗೊಂಡ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts