

ಕೋಲಾರ: ನಗರದ ಮಹಾಲಕ್ಷ್ಮೀ ಲೇಔಟ್ನಲ್ಲಿ ಹಾಡಹಗಲೇ ಯುವತಿಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಕೋಲಾರ ತಾಲೂಕಿನ ನಾಗನಾಯಕನಹಳ್ಳಿಯ ನೀಲವೇಣಿ(29) ಕೊಲೆಯಾದ ದುರ್ದೈವಿ. ಮಹಾಲಕ್ಷ್ಮಿ ಲೇಔಟ್ನಲ್ಲಿ ಫ್ಯಾನ್ಸಿ ಸ್ಟೋರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದಳು.
ಬುಧವಾರ ಹಾಡಹಗಲೇ ಫ್ಯಾನ್ಸಿ ಸ್ಟೋರ್ಗೆ ನುಗ್ಗಿದ್ದ ಅಪರಿಚಿತರು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಹಲ್ಲೆ ಮಾಡಿ ಕೊಂದು ಪರಾರಿಯಾಗಿದ್ದಾರೆ. ಸ್ಟೋರ್ ಒಳಗೆ ಅಪರಿಚಿತರು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.