ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್​, ಸಚಿವ ಆರ್​.ಅಶೋಕ್ ಸಮ್ಮುಖದಲ್ಲಿ ಬಿಜೆಪಿಗೆ ಮಹೇಶ್​ ಸೇರ್ಪಡೆಯಾದರು. ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಎನ್‌.ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಬಳಿಕ ರಾಜಕೀಯ ಭವಿಷ್ಯ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹೇಶ್‌ ಬಿಜೆಪಿಯತ್ತ ವಾಲಿದ್ದರು. ಇತ್ತೀಚೆಗೆ ಬಿಜೆಪಿಗೆ ಸೇರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದ … Continue reading ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ