ದೇವಾಲಯ ನಿರ್ಮಾಣಕ್ಕೆ ನೀರು ಬಿಡಲು ಹೋದ ಗ್ರಾಪಂ ಸದಸ್ಯ ಸಾವು

death
Published on

ವಿಜಯನಗರ: ದೇವಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ನೀರು ಬಿಡಲು ಹೋದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸೋಮವಾರ ಬೆಳಗ್ಗೆ ದುರಂತ ಅಂತ್ಯ ಕಂಡಿದ್ದಾರೆ.

ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಗ್ರಾಪಂ ಸದಸ್ಯ ಕೃಷ್ಣಮೂರ್ತಿ(35) ಮೃತ ದುರ್ದೈವಿ. ಇಂದು ಬೆಳಗ್ಗೆ ಕಟ್ಟಡ ಕಾಮಗಾರಿಗೆ ನೀರು ಬಿಡಲು ಕೃಷ್ಣಮೂರ್ತಿ ಹೋಗಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net