ವಿವಿಧ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್​ಸಿ

KPSC
Published on

ಬೆಂಗಳೂರು: 2021ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಸರ್ಕಾರಿ ನೌಕರರಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್​ಸಿ) ಆನ್​ಲೈನ್​ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುವವರು, ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಪ್ರಾಧಿಕಾರಿಗಳ ಕಾಯಂ ನೌಕರರು ಅರ್ಜಿಗಳನ್ನು ಸಲ್ಲಿಸಬಹುದು. ಅಕ್ಟೋಬರ್ 12ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು. ನವೆಂಬರ್ 12 ಅಂತಿಮ ದಿನ.

ಅರ್ಜಿ ಸಲ್ಲಿಸಲು ಕೆಪಿಎಸ್​ಸಿ ವೆಬ್​ಸೈಟ್​ಗೆ ಭೇಟಿ ನೀಡಬಹುದು.

ಮೂರು ಹಂತಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಪ್ರಥಮ ಹಂತವಾಗಿ ಬೆಂಗಳೂರು ನಗರ ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳು, ದ್ವಿತೀಯ ಹಂತವಾಗಿ ನಾಲ್ಕು ವಿಭಾಗೀಯ ಕೇಂದ್ರಗಳಾದ ಬೆಂಗಳೂರು, ಬೆಳಗಾವಿ, ಮೈಸೂರು, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ತೃತೀಯ ಹಂತವಾಗಿ ಬೆಂಗಳೂರು ಪರೀಕ್ಷಾ ಕೇದ್ರಗಳಲ್ಲಿ ಮಾತ್ರ ಪರೀಕ್ಷೆಗಳು ನಡೆಯಲಿವೆ ಎಂದು ಕೆಪಿಎಸ್​ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net