More

    ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

    ಮಂಡ್ಯ/ಮೈಸೂರು: ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80) ಅವರು ಶುಕ್ರವಾರ ನಿಧನರಾದರು.

    ಲಿವರ್ ಕ್ಯಾನ್ಸರ್​ಗೆ ತುತ್ತಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆತರಲಾಗಿತ್ತು. ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ನಾಳೆ ಬೆಳಗ್ಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

    ಕೆ.ಆರ್‌.ಪೇಟೆ ಕ್ಷೇತ್ರದಿಂದ ಮೂರು ಶಾಸಕರಾಗಿ ಆಯ್ಕೆಯಾಗಿದ್ದ ಕೃಷ್ಣ ಅವರು ಒಮ್ಮೆ ಸಚಿವರಾಗಿ, ಒಮ್ಮೆ ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. 1996ರಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು. ಜನತಾಪಕ್ಷದ ಎಸ್‌.ಆರ್‌.ಬೊಮ್ಮಾಯಿ ಸರ್ಕಾರದಲ್ಲಿ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರಾಗಿದ್ದ ಕೃಷ್ಣ, 2004ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ವಿಧಾನಸಭೆ ಸ್ಪೀಕರ್‌ ಆಗಿದ್ದರು. 2006ರ ಜೆಡಿಎಸ್‌-ಬಿಜೆಪಿ ಸರ್ಕಾರದಲ್ಲೂ ಸ್ಪೀಕರ್‌ ಆಗಿ ಮುಂದುವರಿದಿದ್ದರು. 2008 ಹಾಗೂ 2013ರ ಅಸೆಂಬ್ಲಿ ಚುನಾವಣೆಯಲ್ಲಿ ಪರಾಭವಗೊಂಡರು. 2018ರಲ್ಲಿ ಅನಾರೋಗ್ಯ ಕಾರಣಕ್ಕೆ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದರು.

    ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

    ಕರೊನಾ ಲಸಿಕೆಯಲ್ಲೂ ಹಣ ಪೀಕಿದ ವೈದ್ಯೆ! ಈಕೆ ಬಳಿ ವ್ಯಾಕ್ಸಿನ್​ ಪಡೆದವರಿಗೆ ಇಲ್ಲಿದೆ ಶಾಕಿಂಗ್​ ನ್ಯೂಸ್

    ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

    ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts