ಕೆಎಸ್ಸಾರ್ಟಿಸಿ ಬಸ್​-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು

accident
Published on

ತುಮಕೂರು: ಮಧುಗಿರಿ ತಾಲೂಕಿನ ಕೆರಗಳಪಾಳ್ಯ ಬಳಿ ಭಾನುವಾರ ಬೆಳಗ್ಗೆ ಕೆಎಸ್ಆರ್​ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.

ಮಧುಗಿರಿ ಕಡೆಯಿಂದ ಬೆಂಗಳೂರಿಗೆ ಹೊಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ದ್ವಿಚಕ್ರ ವಾಹನದಲ್ಲಿ ಕುಳಿತ್ತಿದ್ದ ದಂಪತಿ ಗಂಭೀರಗಾಯಗೊಂಡು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಮಧುಗಿರಿಯ ಗೊಂದಿಹಳ್ಳಿ ಮೂಲದ ನಿವಾಸಿಗಳು ಎನ್ನಲಾಗಿದೆ.

ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net