ಕೆಎಸ್ಸಾರ್ಟಿಸಿ ಬಸ್​- ಕಾರು ಅಪಘಾತ: ಮದುವೆ ಆರತಕ್ಷತೆಗೆ ಹೊರಟಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

accident (3)
Published on

ದಾವಣಗೆರೆ: ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಡೆಹಳ್ಳಿ ಗ್ರಾಮದ ಶಾರದಮ್ಮ(70), ಸುಮಾ(50) ಮತ್ತು ಆಶಾ(40) ಮೃತ ದುರ್ದೈವಿಗಳು. ಕಾರು ಚಾಲಕ ಮತ್ತು ಮತ್ತೊಬ್ಬ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಸಂಬಂಧಿಕರ ಮದುವೆ ಆರತಕ್ಷತೆ ಕಾರ್ಯಕ್ರಮಕ್ಕೆಂದು ನ್ಯಾಮತಿ ತಾಲೂಕಿನ ಹಳೆ ಜೋಗಕ್ಕೆ ಇಂಡಿಕಾ ಕಾರಿನಲ್ಲಿ ಹೋಗುತ್ತಿದ್ದರು.

ಮಾರ್ಗಮಧ್ಯೆ ಸವಳಂಗ-ಶಿವಮೊಗ್ಗ ಹೆದ್ದಾರಿಯ ಸವಳಂಗ ಬ್ರಿಡ್ಜ್ ಸಮೀಪ ಕಾರು ಮತ್ತು ಸಾರಿಗೆ ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಹಿಂಬದಿಯಿಂದ ಕೆಎಸ್​ಆರ್​ಡಿಸಿ ಬಸ್​ಗೆ ಟ್ಯಾಂಕರ್​ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net