ಕೆಎಸ್ಸಾರ್ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳ ಸಾವು

New Project(11)
Published on

ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ಓರ್ವನ‌ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರೂ ಬೇಲೂರಿನ ನಿವಾಸಿಗಳು ಹಾಗೂ ಸ್ನೇಹಿತರು.

ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. (ಇದಿಷ್ಟು ಪ್ರಾಥಮಿಕ ಮಾಹಿತಿ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net