ಕೆಎಸ್​ಆರ್​ಟಿಸಿ ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ!

suicide try
Published on

ಮಂಡ್ಯ: ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸಾರಿಗೆ ನಿಗಮ ಅಧಿಕಾರಿಗಳು ಮತ್ತು ಸರ್ಕಾರ ಪ್ರಯೋಗಿಸಿರುವ ವರ್ಗಾವಣೆ ಅಸ್ತ್ರಕ್ಕೆ ಆತಂಕಗೊಂಡ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಳವಳ್ಳಿ ಕೆಎಸ್​ಆರ್​ಟಿಸಿ ಡಿಪೋದ ಚಾಲಕ ಕಂ ನಿರ್ವಾಹಕ ರವಿಶಂಕರ್(54) ಆತ್ಮಹತ್ಯೆಗೆ ಯತ್ನಿಸಿದವ. ಮಳವಳ್ಳಿ ಪಟ್ಟಣದ ಸಿದ್ಧಾರ್ಥ ನಗರದಲ್ಲಿ ವಾಸವಾಗಿದ್ದರು. ಇದನ್ನೂ ಓದಿರಿ ಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!

ರವಿಶಂಕರ್ ಜತೆ ಕೆಲಸ ನಿರ್ವಹಿಸುತ್ತಿದ್ದ ನಾಲ್ವರನ್ನ ಅಧಿಕಾರಿಗಳು ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ. ತನ್ನನ್ನೂ ವರ್ಗಾವಣೆ ಮಾಡಬಹುದು ಎಂಬ ಆತಂಕದಲ್ಲಿ ಬೆಳೆ ಔಷಧ ಸೇವಿಸಿ ರವಿಶಂಕರ್ ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ. ಮಳವಳ್ಳಿ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net