ಗಗನಚುಕ್ಕಿ-ಭರಚುಕ್ಕಿಗೆ ಟೂರ್​ ಪ್ಯಾಕೇಜ್​ ಘೋಷಿಸಿದ ಕೆಎಸ್​ಆರ್​ಟಿಸಿ: ಪ್ರವಾಸ ದರ ತಲಾ 250 ರೂಪಾಯಿ

ಬೆಂಗಳೂರು: ಮುಂಗಾರು ಮಳೆ ಜೋರಾಗಿದ್ದು, ಗಗನಚುಕ್ಕಿ-ಭರಚುಕ್ಕಿ ಜಲಪಾತದಲ್ಲಿ ಹಾಲ್ನೊರೆಯಂತೆ ನೀರು ಧುಮ್ಮಿಕ್ಕುತ್ತಿದ್ದು, ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಬಹುತೇಕರು ಪ್ರಕೃತಿ ಮಡಿಲಲ್ಲಿ ಒಂದು ದಿನ ಸಮಯ ಕಳೆಯಲು ಹವಣಿಸುತ್ತಿದ್ದಾರೆ. ಇಂಥವರಿಗೆ ಅನುಕೂಲವಾಗಲೆಂದು ಕೆಎಸ್​ಆರ್​ಟಿಸಿ ಟೂರ್​ ಪ್ಯಾಕೇಜ್​ ಘೋಷಿಸಿದ್ದು, ತಲಾ 250 ರೂಪಾಯಿಯಲ್ಲಿ ಗಗನಚುಕ್ಕಿ-ಭರಚುಕ್ಕಿಗೆ ಪ್ರವಾಸ ಮಾಡಬಹುದು. ನದಿಯಲ್ಲಿ ನೀರು ಹೆಚ್ಚಾಗಿರುವುದನ್ನು ತಿಳಿದ ಪ್ರವಾಸಿಗರು ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳನ್ನು ವೀಕ್ಷಣೆ ಮಾಡಲು ಒಂದು ವಾರದಿಂದಲೇ ಸಾವಿರಾರು ಸಂಖ್ಯೆಯಲ್ಲಿ ಮಂದಿ ಆಗಮಿಸುತ್ತಿದ್ದರು. ಕೆಎಸ್​ಆರ್​ಟಿಸಿ ಬೆಂಗಳೂರು ಕೇಂದ್ರೀಯ … Continue reading ಗಗನಚುಕ್ಕಿ-ಭರಚುಕ್ಕಿಗೆ ಟೂರ್​ ಪ್ಯಾಕೇಜ್​ ಘೋಷಿಸಿದ ಕೆಎಸ್​ಆರ್​ಟಿಸಿ: ಪ್ರವಾಸ ದರ ತಲಾ 250 ರೂಪಾಯಿ