ಡಿಕೆಶಿ ಮುಖ್ಯಮಂತ್ರಿ ಆಗೋದು ಖಚಿತ! ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್

dks
Published on

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಅವರು ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ವೈರಲ್​ ಆಗಿದೆ.

ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ ಮುಖ್ಯಮಂತ್ರಿ ಆಗುವಂತೆ ಕಾಂಗ್ರೆಸ್​ಗೆ ಮತ ಹಾಕಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತಗೊಂಡು ಕಾಂಗ್ರೆಸ್​ಗೆ ಸಪೋರ್ಟ್ ಮಾಡಿ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದನಂತರ ಕ್ಷೇತ್ರದ ಅಭಿವೃದ್ಧಿ ಖಂಡಿತಾ ಆಗುತ್ತೆ. ಅವರು ಸಿಎಂ ಆದ್ರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆದಂತೆ. ಎಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ನಿಮ್ಮೂರಿಗೆ ರಸ್ತೆ ಸೇರಿದಂತೆ ಅಭಿವೃದ್ಧಿ ಕೆಲಸ ಮಾಡಲು ಕ್ರಮ ಕೈಗೊಳ್ಳುವೆ ಎಂದು ಕೈಮುಗಿದು ಕಾರನ್ನು ಹತ್ತುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಶಾಸಕ ರಂಗನಾಥ್ ಅವರು ಡಿ.ಕೆ.ಶಿವಕುಮಾರ್​ರ ಸಂಬಂಧಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net