More

    ಕುಣಿಗಲ್​ನಲ್ಲಿ ಅಕ್ರಮವಾಗಿ ಜಲ್ಲಿಕಲ್ಲು ಸಾಗಾಟ: ರಸ್ತೆಬದಿ ನಿಂತು ಹಣ ವಸೂಲಿ ಮಾಡುತ್ತಿದ್ದ ಪೊಲೀಸರಿಗೆ ಆಯ್ತು ತಕ್ಕಶಾಸ್ತಿ

    ತುಮಕೂರು: ಅಕ್ರಮವಾಗಿ ಟ್ರ್ಯಾಕ್ಟರ್​ನಲ್ಲಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದವರನ್ನು ಬಂಧಿಸುವ ಬದಲು, ರಸ್ತೆಬದಿ ನಿಂತು ಅವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಪೊಲೀಸ್​ ಕಾನ್​ಸ್ಟೇಬಲ್​ಗಳನ್ನು ಕೆಲಸದಿಂದ ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

    ಕುಣಿಗಲ್ ಪೊಲೀಸ್ ಠಾಣೆಯ ಹೊಯ್ಸಳ ವಾಹನದ ಚಾಲಕ ಪರಮೇಶ್ವರ್, ಕಾನ್​ಸ್ಟೇಬಲ್​ ಅಶೋಕ್ ಎಂ. ಛಲವಾದ್ ಅಮಾನತುಗೊಂಡವರು.

    ಕುಣಿಗಲ್ ತಾಲೂಕಿನ ತರೀಕೆರೆ, ಗೌಡನಪಾಳ್ಯ ಸಮೀಪ ಅಕ್ರಮವಾಗಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ರಸ್ತೆಬದಿ ನಿಂತು ಪೊಲೀಸ್​ ಕಾನ್​ಸ್ಟೇಬಲ್​ಗಳು ಹಣ ಪಡೆಯುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೀಡಾಗಿತ್ತು. ಈ ಸಂಬಂಧ ಕುಣಿಗಲ್ ಸಿಪಿಐ ಗುರುಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಆರೋಪ ಸಾಬಿತಾದ ಹಿನ್ನೆಲೆ ಇಬ್ಬರನ್ನೂ ಅಮಾನತು ಮಾಡಲಾಗಿದೆ.

    PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

    ನಾಗರಹಾವಿನ ಹೆಡೆಯಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿದ ತಾಯಿ! ಮಂಡ್ಯದಲ್ಲಿ ಎದೆ ಝಲ್​ ಅನ್ನಿಸೋ ಘಟನೆ, ವಿಡಿಯೋ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts