ಕುಪ್ಪೂರು ಗದ್ದುಗೆ ಮಠಾಧ್ಯಕ್ಷ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

kappuru gadduge shri
Published on

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಕುಪ್ಪೂರು ಗದ್ದುಗೆ ಮಠಾಧ್ಯಕ್ಷ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಶನಿವಾರ ಲಿಂಗೈಕ್ಯರಾದರು. ಶ್ರೀಗಳಿಗೆ 48 ವರ್ಷ ವಯಸ್ಸಾಗಿತ್ತು.

ಕುಪ್ಪೂರು ಶ್ರೀಗಳ ಆರೊಗ್ಯದಲ್ಲಿ ಶುಕ್ರವಾರ ರಾತ್ರಿ ಏರುಪೇರಾದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತಲ್ಲದೆ, ಸ್ಯಾಚುರೇಷನ್ ಲೆವೆಲ್ ಕುಸಿದಿತ್ತು. ಬೆಳಗ್ಗೆ 11ಕ್ಕೆ ಹೃದಯ ಸ್ಥಂಭನವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದರು. ನೀರಾವರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸ್ವಾಮೀಜಿ ಅವರು ಸಾಕಷ್ಟು ಸಾಮಾಜಿಕ ಹೋರಾಟದಲ್ಲಿಯೂ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net