ಬಿಳಿಗಿರಿರಂಗನ ಬೆಟ್ಟದಲ್ಲಿ 'ಮೈತ್ರಿ ಮುಟ್ಟಿನ ಕಪ್' ಯೋಜನೆಗೆ ಚಾಲನೆ

Maithri Menstrual Cup
Published on

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದಲ್ಲಿ 'ಮೈತ್ರಿ ಮುಟ್ಟಿನ ಕಪ್' ಯೋಜನೆಗೆ ಬುಧವಾರ ಚಾಲನೆ ನೀಡಲಾಯಿತು.

ಮುಟ್ಟಿನ ನೈರ್ಮಲ್ಯ ನಿರ್ವಹಣೆ ಯೋಜನೆಯಡಿ ರಾಜ್ಯದಲ್ಲಿ ಮುಟ್ಟಿನ‌ ಕಪ್ ಪರಿಚಯಿಸುತ್ತಿದ್ದು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಎರಡೂ ಜಿಲ್ಲೆಗಳ ಫಲಿತಾಂಶ ಆಧರಿಸಿ ಇತರ ಜಿಲ್ಲೆಗಳಿಗೆ ವಿಸ್ತರಣೆ ಮಾಡುವ ಉದ್ದೇಶ ಇದೆ.

ಹದಿಹರೆಯದ ಹೆಣ್ಣು‌ಮಕ್ಕಳ ಸ್ವಚ್ಛ ಹಾಗೂ ಸುರಕ್ಷಿತ ಋತುಚಕ್ರ ನಿರ್ವಹಣೆಗೆ ಅನುಕೂಲವಾಗುವಂತೆ ಕಳೆದ ಸಾಲಿನ ಬಜೆಟ್​ನಲ್ಲಿ 'ಮೈತ್ರಿ ಮುಟ್ಟಿನ ಕಪ್ ಯೋಜನೆ'ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ 16ರಿಂದ 19 ವರ್ಷ ವಯಸ್ಸಿನ ಹೆಣ್ಣುಮಕ್ಕಳು ಈ ಯೋಜನೆಯ ಫಲಾನುಭವಿಗಳಾಗಿದ್ದು, ಪ್ರಸ್ತುತ ನೀಡುತ್ತಿರುವ ಸ್ಯಾನಿಟರಿ ಪ್ಯಾಡ್ ಬದಲಾಗಿ ಮುಟ್ಟಿನ ಕಪ್ ವಿತರಿಸಲು ನಿರ್ಧರಿಸಿದೆ. ಪರಿಸರ ಸ್ನೇಹಿಯಾದ ಮುಟ್ಟಿನ ಕಪ್ ಅನ್ನು ಮರುಬಳಕೆ ಮಾಡಬಹುದು.

ಮಹತ್ವದ ಯೋಜನೆಗೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಚಾಲನೆ ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ, ಚಿತ್ರ ನಟಿ ಅಮೃತಾ ಅಯ್ಯಂಗಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸ್ಥಳೀಯ ಹೆಣ್ಣುಮಕ್ಕಳಲ್ಲಿ ಮೈತ್ರಿ ಮುಟ್ಟಿನ ಕಪ್​ ಬಗ್ಗೆ ಜಾಗೃತಿ ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net