More

    ಆಂಜನೇಯ ಸ್ವಾಮಿಯ ಅದ್ದೂರಿ ಉತ್ಸವ

    ಎಚ್.ಡಿ.ಕೋಟೆ: ತಾಲೂಕಿನ ಶಾಂತಿಪುರ(ಹೆಬ್ಬಳ್ಳ) ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ 9ನೇ ವರ್ಷದ ಕುಂಭಾಭಿಷೇಕ ಮಹೋತ್ಸವ ಗುರುವಾರ ಅದ್ದೂರಿಯಾಗಿ ನೆರವೇರಿತು.

    ಜ.23 ರಂದು ಶ್ರೂಹನುಮ ಮಾಲಧಾರಣೆ ಕಾರ್ಯಕ್ರಮ ಜರುಗಿತು. 24 ರಂದು ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ಬೃಂದಾವನ ತುಳಸಿ ಪೂಜೆ ನಡೆಯಿತು. 25 ರಂದು ಬೆಳಗ್ಗೆ ಶ್ರೀ ಗಣಪತಿ ಪೂಜೆ, ಪುಣ್ಯಾಹ, ಪಂಚಗವ್ಯ ಆರಾಧನೆ ಮತ್ತು ಪವಮಾನ ಹೋಮ, ಪೂರ್ಣಾಹುತಿ ಹಾಗೂ ಕುಂಭಾಭಿಷೇಕ ನೆರವೇರಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೂರದ ಊರುಗಳಿಂದ ಬಂದಿದ್ದ ಭಕ್ತಾದಿಗಳು ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಭಕ್ತಿಭಾವ ಮೆರೆದರು.

    ಅದ್ದೂರಿ ಮೆರವಣಿಗೆ: ಗುರುವಾರ ಸಂಜೆ ಆಂಜನೇಯಸ್ವಾಮಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಸಂಜೆ 5 ಗಂಟೆಗೆ ಬೆಳ್ಳಿರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯರೊಂದಿಗೆ ಗ್ರಾಮದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ರಸ್ತೆಯ ಬಳಿ ಬಂದ ಗ್ರಾಮದ ಮಹಿಳೆಯರು ಸ್ವಾಮಿಗೆ ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆದರು. ಮೆರವಣಿಗೆಯಲ್ಲಿ ಪಾಲ್ಗೊಂಡ ಯುವಕ ಯುವತಿಯರು ಕುಣಿದು ಕುಪ್ಪಳಿಸಿದರು. ರಾತ್ರಿ 12 ಗಂಟೆಗೆ ಹೆಬ್ಬಳ್ಳ ಕೆರೆಯಲ್ಲಿ ಸ್ವಾಮಿಯ ತೆಪ್ಪೋತ್ಸವ ಜರುಗಿತು. ಗಂಗಾಮಾತೆಗೆ ಪೂಜೆ ಸಲ್ಲಿಸಿ ಉತ್ಸವ ಮೂರ್ತಿಯನ್ನು ಗುಡಿಯೊಳಗೆ ಇಡಲಾಯಿತು.
    ಹಬ್ಬದ ಹಿನ್ನೆಲೆಯಲ್ಲಿ ಗ್ರಾಮವನ್ನು ತಳಿರು ತೊರಣಗಳಿಂದ ಸಿಂಗರಿಸಲಾಗಿತ್ತು. ಬೀದಿಯನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಎಲ್ಲೆಲ್ಲೂ ಕೇಸರಿ ಧ್ವಜ, ಹನುಮಂತನ ಭಾವಚಿತ್ರವಿರುವ ಬಂಟಿಂಗ್ಸ್ ರಾರಾಜಿಸಿದವು. ಪೂಜಾ ಕಾರ್ಯಕ್ರಮಗಳನ್ನು ವೀಕ್ಷಿಸಲು ದೂರದ ಊರುಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಅಲ್ಲದೆ ಶಾಂತಿಪುರ, ಬೋಚಿಕಟ್ಟೆ, ಕೆ.ಜಿ.ಹುಂಡಿ, ಎಚ್.ಡಿ.ಕೋಟೆ ಪಟ್ಟಣದ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಆಗಮಿಸಿ ದೇವರ ದರ್ಶನ ಪಡೆದರು.

    ಎಚ್.ಡಿ.ಕೋಟೆಯ ಅರ್ಚಕರಾದ ರಘುಕೀರ್ತಿ, ಬಸವಣ್ಣ ದೀಕ್ಷಿತ್, ರವಿ ಹಾಗೂ ಸಂದೀಪ್ ಹಾಗೂ ಗ್ರಾಮದ ಎಲ್ಲ ಸಮುದಾಯದ ಮುಖಂಡರು ನೇತೃತ್ವ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts