More

  ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ

  ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತದಾನದ ಜಾಗೃತಿ ಸಂಬಂಧ ಪತ್ರ ಬರೆದು ಪಾಲಕರಿಗೆ ನೀಡಿದರು.

  ಮತ ಚಲಾಯಿಸುವುದು ಪ್ರತಿಯೊಬ್ಬರ ಹಕ್ಕು. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ನಿರ್ಭಯ ಹಾಗೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಇದರಿಂದ ಉತ್ತಮ ಸರ್ಕಾರ ರಚಿಸಲು ಸಾಧ್ಯ ಎಂದು ಪತ್ರ ಬರೆದ ಮಕ್ಕಳು ಪಾಲಕರಿಗೆ ನೀಡಿದರು.

  ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹೂ ಹಾಗೂ ಇತರ ಹಿರಿಯ ಅಧಿಕಾರಿಗಳು ಮತದಾನ ಜಾಗೃತಿ ಸಂಬಂಧ ಮಾತನಾಡಿರುವ ವಿಡಿಯೋ ತುಣುಕನ್ನು ಪ್ರದರ್ಶಿಸುವ ಮೂಲಕ ಮತದಾರರಲ್ಲಿ ಅರಿವು ಮೂಡಿಸಲಾಯಿತು. ಸ್ವೀಪ್ ಕಾರ್ಯಕ್ರಮದ ಸಂಯೋಜಕ ಮಹೇಶ್, ಪಿಡಿಒ ಲೋಕೇಶ್, ಶಿಕ್ಷಕರು ಹಾಗೂ ಗ್ರಾಮಸ್ಥರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts