More

  ರೈತ ಉತ್ಪಾದಕ ಸಂಸ್ಥೆಗಳಿಗೆ ಬರೆ: ರೈತ ಮೋರ್ಚಾ ಪ್ರತಿಭಟನೆ

  ಶಿವಮೊಗ್ಗ: ರೈತ ಉತ್ಪಾದಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

  2021ರಿಂದ ಇದುವರೆಗೆ 490 ರೈತ ಉತ್ಪಾದಕ ಸಂಸ್ಥೆಗಳು ರಚನೆಯಾಗಿವೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಇದಕ್ಕಾಗಿ ಅನುದಾನ ಒದಗಿಸಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
  ಹೊಸನಗರ, ಸೊರಬ, ಸಾಗರದ ಹಲವು ಕಡೆಗಳಲ್ಲಿ ಪಶು ವೈದ್ಯಾಧಿಕಾರಿಗಳು ಕರ್ತವ್ಯಲೋಪ ಎಸಗುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬರುತ್ತಿಲ್ಲ. ಹಲವು ವರ್ಷಗಳಿಂದ ಒಂದೇ ಕಡೆ ಠಿಕಾಣಿ ಹೂಡಿರುವ ವೈದ್ಯರಿಂದ ಜಾನುವಾರುಗಳಿಗೆ ಸೂಕ್ತ ಸೇವೆ ಸಿಗುತ್ತಿಲ್ಲ. ಹೀಗಾಗಿ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿದರು.
  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ಇದರಿಂದ ಬಡವರು ಸೂಕ್ತ ಸಮಯದಲ್ಲಿ ಆಯುಷ್ಮಾನ್ ಭಾರತ್ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸರ್ವರ್ ಸಮಸ್ಯೆ ಪರಿಹರಿಸಿ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಜನರು ಆಯುಷ್ಮಾನ್ ಕಾರ್ಡ್ ಪಡೆಯಲು ಸಹಕರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
  ಪ್ರತಿಭಟನೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಕುಮಾರ ನಾಯ್ಡು, ಗಣೇಶ್ ಬಿಳಕಿ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts