ವಿಜಯವಾಣಿ ಸುದ್ದಿಜಾಲ ಕುಂದಾಪುರ
ಸಮಾಜದಲ್ಲಿ ಗೌರವಯುತ ಜೀವನ ಸಾಗಿಸುವುದು, ಸಮಾನ ಅವಕಾಶಗಳನ್ನು ನೀಡುವುದು ಮತ್ತು ನಮ್ಮ ಹಕ್ಕುಗಳನ್ನು ರಕ್ಷಣೆ ಮಾಡುವುದು ಈ ಮೂರು ತರ್ಕಗಳ ಆಧಾರದ ಮೇಲೆ ಅಂಗವಿಕಲರ ಕಾಯ್ದೆ ರೂಪಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಆರ್.ಯೋಗೀಶ್ ಹೇಳಿದರು.
ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ, ಉಡುಪಿ ಜಿಲ್ಲಾ ಸಮಿತಿ ಕುಂದಾಪುರ ಹಾಗೂ ಬೈಂದೂರು ತಾಲೂಕು, ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಮತ್ತು ವಿವಿಧ ಇಲಾಖೆ ಸಹಕಾರದೊಂದಿಗೆ ಕುಂದಾಪುರದಲ್ಲಿ ಶನಿವಾರ ದಿವ್ಯಾಂಗರ ಸಮಾವೇಶ, ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಅಧ್ಯಕ್ಷ ಮಂಜುನಾಥ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರುರಾಜ್ ಗಂಟಿಹೊಳೆ ಶುಭಹಾರೈಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಭಟ್ ದಿಕ್ಸೂಚಿ ಭಾಷಣ ಮಾಡಿದರು. ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೇರಿ ದಿವ್ಯಾಂಗರ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ರತ್ನಾ, ದಿವ್ಯಾಂಗರ ರಕ್ಷಣಾ ಸಮಿತಿ ಸಂಚಾಲಕ ವಿಜಯ ಕೊಡವೂರು, ಅಂಗನವಾಡಿ ಮೇಲ್ವಿಚಾರಕಿ ಸಿಂಧು, ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಗೌರವಾಧ್ಯಕ್ಷ ವೆಂಕಟೇಶ ಕೋಣಿ ಉಪಸ್ಥಿತರಿದ್ದರು. ಮಂಜುನಾಥ ಹೆಬ್ಬಾರ್ ಸ್ವಾಗತಿಸಿದರು. ಉದಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.