

ತುಮಕೂರು: ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲೇ ಬೈಕ್ ಹೊತ್ತಿ ಉರಿದಿದೆ. ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ರಾಮಚಂದ್ರ(30) ಮತ್ತು ಪ್ರಿಯಾ(25) ಮೃತ ದುರ್ದೈವಿಗಳು. ಇವರಿಬ್ಬರೂ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಮೂಲದವರು. ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.