More

    ಸ್ಮಾರ್ಟ್‌ಸಿಟಿ ಅವ್ಯವಸ್ಥೆ: ಲಾರಿ ಹಿಂಬದಿ ಚಕ್ರಕ್ಕೆ ಸಿಲುಕಿ ಸರ್ಕಾರಿ ಶಾಲೆ ಶಿಕ್ಷಕ ಸಾವು

    ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಶನಿವಾರ ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ.

    ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದ ರಂಗನಾಥ, ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ 100 ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ವಿನೋಬನಗರದ ಕಳೆದ ಮೂರು ವರ್ಷಗಳಿಂದ ಕುಂಟುತ್ತಾ ಕಾಮಗಾರಿ ಸಾಗಿದ್ದು, ಈ ಭಾಗದಲ್ಲಿ ಪದೇಪದೆ ಅಪಘಾತ ಪ್ರಕರಣ ಸಂಭವಿಸುತ್ತಲೇ ಇದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಒಂದೇ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಕಾಮಗಾರಿ ವಿಳಂಬದಿಂದಲೇ ಅಪಘಾತ ಪ್ರಕರಣ ಹೆಚ್ಚಾಗುತ್ತಿದೆ ಎಂದು ಸ್ಥಲೀಯರು ಆಕ್ರೋಶ ಹೊರ ಹಾಕಿದ್ದಾರೆ.

    ಮೈಸೂರಲ್ಲಿ ಗ್ಯಾಂಗ್​ ರೇಪ್​ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್​: ನಾನು ದೂರು ಕೊಡಲ್ಲ, ನನ್ನನ್ನು ಬಿಟ್ಟುಬಿಡಿ…

    ನನ್ನನ್ನು ತಳ್ಳಿ ಗೆಳತಿಯನ್ನು ಪೊದೆಯತ್ತ ಎಳೆದೊಯ್ದರು… ​ ಸಂತ್ರಸ್ತೆಯ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

    ಮೈಸೂರಲ್ಲಿ ಗ್ಯಾಂಗ್​ ರೇಪ್​: ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಕಾಮುಕರು, ರಾತ್ರಿವರೆಗೂ ಕಾದು ಅಟ್ಟಹಾಸ ಮೆರೆದ್ರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts