ವಿಜಯಪುರ: ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬುಧವಾರ ಮುಂಜಾನೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಪಿಡಿಜೆ ಶಾಲೆಯ ಶಿಕ್ಷಕ ಮಂಜುನಾಥ ಮುಂಡೆವಾಡಿ(42), ಇವರ ಪತ್ನಿ ಸಾವಿತ್ರಿ(37), ಮಗು ಆರಾಧ್ಯ (8) ಮೃತರು. ಲಾರಿ ಚಾಲಕನ ಹೆಸರು ಗೊತ್ತಾಗಿಲ್ಲ.
ಶಿಕ್ಷಕನ ಕುಟುಂಬ ಗೋವಾದಿಂದ ವಾಪಸ್ ವಿಜಯಪುರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದರು. ಮಾರ್ಗಮಧ್ಯೆ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯನ್ನ ದುರಸ್ತಿ ಮಾಡುತ್ತಾ ಚಾಲಕ ನಿಂತಿದ್ದ. ಈ ವೇಳೆ ಯಮನಂತೆ ಬಂದ ಕಾರು ಲಾರಿಗೆ ಅಪ್ಪಳಿಸಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಜತೆಗೆ ಕಾರಿನಲ್ಲಿದ್ದ ಓರ್ವ ಪುರುಷ, ಓರ್ವ ಮಹಿಳೆ ಹಾಗೂ ಒಂದು ಮಗು ಸೇರಿ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದರು.
ಡೇಟಿಂಗ್ಗಾಗಿ ಹಾತೊರೆದು ಆತನ ಗೆಳೆತನ ಬೆಳೆಸಿದ ಬೆನ್ನಲ್ಲೇ ಮಹಿಳಾ ಉದ್ಯೋಗಿಗೆ ಕಾದಿತ್ತು ಆಘಾತ!
ಪರಸ್ತ್ರೀ ಜತೆ ಗ್ರಾಪಂ ಅಧ್ಯಕ್ಷೆ ಗಂಡನ ಕಾಮದಾಟ! ವಾಟ್ಸ್ಆ್ಯಪ್ ಗ್ರೂಪ್ಗೆ ತನ್ನದೇ ಫೋಟೋ ತಾನೇ ಹಾಕಿಕೊಂಡ…
ಸಖತ್ ವೈರಲ್ ಆಗ್ತಿರೋ ಮದ್ವೆ ಫೋಟೋ ಹಿನ್ನೆಲೆ ಗೊತ್ತಾ? ಯುವತಿ ಹೇಳಿಕೆ ಕೇಳಿದ್ರೆ ಅಚ್ಚರಿಯಾಗೋದು ಖಂಡಿತ!