ಶಿರಾದಲ್ಲಿ ಭೀಕರ ಅಪಘಾತ, 9 ಮಂದಿ ಸಾವು: ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ

New Project
Published on

ತುಮಕೂರು: ಶಿರಾ ತಾಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಇಂದು(ಗುರುವಾರ) ಬೆಳಗಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.

ದುರಂತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.

'ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ ಘಟನೆ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರದಲ್ಲಿ ಪ್ರಾರ್ಥಿಸುವೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು' ಎಂದು ಪ್ರಧಾನಿ ಅವರು ಟ್ವೀಟ್​ ಮಾಡಿದ್ದಾರೆ.

ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಈ ಪೈಕಿ ಇಬ್ಬರು ಮಕ್ಕಳು. ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಕೂಲಿ ಕೆಲಸ ಅರಸಿ ಕ್ರೂಸರ್​ ವಾಹನದಲ್ಲಿ ಗುಳೆ ಹೊರಟ್ಟಿದ್ದರು. ಮಾರ್ಗಮಧ್ಯೆ ಕ್ರೂಸರ್​ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. 14 ಮಂದಿ ಗಾಯಗೊಂಡಿದ್ದು, ಇಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್​ಗೆ ರವಾನಿಸಲಾಗಿದೆ.

Koo App
Shocked to hear the news that 9 people died and more than 13 others were injured in a terrible road accident near Shira in Tumkur district. I am deeply saddened to know that the deceased were labourers, all of them were coming from Raichur to Bangalore to work. I demand that the Chief Minister Mr. @bsbommai himself should immediately take action and provide adequate compensation to all the families of those who lost their lives and provide the best treatment to the injured free of cost. May all the injured get well soon.-H D Kumaraswamy (@h_d_kumaraswamy)25 Aug 2022
Koo App
ತುಮಕೂರಿನ ಶಿರಾ ಬಳಿ ಇಂದು ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದ್ದು 9 ಮಂದಿ ಮೃತಪಟ್ಟು, 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮಾನ್ಯ ಪ್ರಧಾನಿ ಶ್ರೀ @narendramodi ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
View attached media content
-Araga Jnanendra (@aragajnanendra)25 Aug 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net