More

    ಹೊಲದಲ್ಲಿದ್ದ ಅಪ್ಪ-ಅಮ್ಮನಿಗೆ ಟೀ ತರಲೆಂದು ಮನೆಗೆ ಬಂದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ

    ಮಧುಗಿರಿ: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಮಧುಗಿರಿಯಲ್ಲೂ 12 ವರ್ಷದ ಬಾಲಕಿ ಮೇಲೆ ಕಾಮುಕ ವೃದ್ಧನೊಬ್ಬ ಅಟ್ಟಹಾಸ ಮೆರೆದಿದ್ದಾನೆ ಎಂಬ ಕೇಸ್​ ದಾಖಲಾಗಿದೆ.

    ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ-ತಾಯಿಗೆ ಟೀ ಮಾಡಿಕೊಡಲೆಂದು ಮನೆಗೆ ಬಂದ 12 ವರ್ಷದ ಬಾಲಕಿಯನ್ನು ಹಿಂಬಾಲಿಕೊಂಡೇ ಬಂದ 65 ವರ್ಷದ ವೃದ್ಧನೊಬ್ಬ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ ಎಂದು ಪಟ್ಟಣ ಠಾಣೆಗೆ ಬಾಲಕಿ ತಂದೆ ದೂರು ನೀಡಿದ್ದಾರೆ.

    ಆ.23ರಂದು ಹೊಲದಲ್ಲಿ ಬಾಲಕಿ ತಂದೆ-ತಾಯಿ ಕೆಲಸ ಮಾಡುತ್ತಿದ್ದರು. ಸಂಜೆಯಾಗುತ್ತಿದ್ದಂತೆ ಮನೆಗೆ ಹೋಗಿ ಟೀ ಮಾಡಿಕೊಂಡು ಬಾರವ್ವ ಎಂದು ಪಾಲಕರು ಮಗಳನ್ನು ಕಳುಹಿಸಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಬಸವನಹಳ್ಳಿ ಗ್ರಾಮದ ಲಿಂಗಣ್ಣ (65) ಅತ್ಯಾಚಾರ ಎಸಗಿದ್ದಾನೆ. ಯಾರಿಗಾದರೂ ವಿಷಯ ಹೇಳಿದರೆ ಕಪಾಳಕ್ಕೆ ಹೊಡೆಯುತ್ತೇನೆ ಎಂದು ಹೆದರಿಸಿದ್ದರಿಂದ ಬಾಲಕಿ ಯಾರ ಬಳಿಯೂ ವಿಷಯ ಹೇಳಿರಲಿಲ್ಲ. ಮೂರು ದಿನದ ನಂತರ ಬಾಲಕಿ ತಾಯಿಯ ಬಳಿ ವಿಷಯ ತಿಳಿಸಿದ್ದು, ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಾಲಕಿಯ ತಂದೆ ಠಾಣೆಗೆ ದೂರು ನೀಡಿದ್ದಾರೆ.

    ಮಗಳ ಪ್ರಿಯಕರನ ಕೊಂದು ಜೈಲು ಸೇರಿದ ಅಪ್ಪ-ಅಮ್ಮ! ಎಲ್ಲವನ್ನೂ ಕಳೆದುಕೊಂಡಾಕೆ ಕೊನೆಗೂ ಬದುಕಲಿಲ್ಲ

    ಮೈಸೂರು ಗ್ಯಾಂಗ್​ ರೇಪ್​: ಆ ತಡರಾತ್ರಿ ಪೊಲೀಸರನ್ನೇ ಚಾಕುವಿನಿಂದ ಇರಿಯಲು ಮನ್ನುಗ್ಗಿದ್ದ ಆರೋಪಿ

    ಬೆಂಗಳೂರಿನ ಮಹಿಳಾ ಟೆಕ್ಕಿ ಮೇಲೆ ಅತ್ಯಾಚಾರ: ಮೂವರೂ ಮದ್ಯ ಕುಡಿದೆವು, ಪ್ರಜ್ಞೆ ಬಂದಾಗ ಆತ ಬೆತ್ತಲಾಗಿದ್ದ…

    ಮೈಸೂರಲ್ಲಿ ಗ್ಯಾಂಗ್​ ರೇಪ್​: ಆರೋಪಿಗಳಲ್ಲೊಬ್ಬ ಭಗ್ನಪ್ರೇಮಿ! ಲವ್​ ಫೇಲ್ಯೂರ್​ಗೆ ಲೈಂಗಿಕ ಚಟ ಅಂಟಿಸಿಕೊಂಡಿದ್ದ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts