ಹನೂರು: ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, 35 ದಿನಗಳಲ್ಲಿ 2.03 ಕೋಟಿ ರೂಪಾಯಿ ಸಂಗ್ರಹವಾಗಿದೆ.
ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಗ್ಗೆ 8ಕ್ಕೆ ಸಾಲೂರು ಬೃಹನ್ಮಾಠಧ್ಯಕ್ಷ ವಿದ್ವಾನ್ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ನಲ್ಲಿ ಪ್ರಾರಂಭಗೊಂಡ ಎಣಿಕೆ ಕಾರ್ಯ ರಾತ್ರಿ 9.30 ರವರೆಗೂ ನಡೆಯಿತು.
ಹುಂಡಿಯಲ್ಲಿ 2,03,25,354 ರೂಪಾಯಿ ನಗದು, 110 ಗ್ರಾಂ ಚಿನ್ನ ಹಾಗೂ 3.560 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಕಳೆದ ಬಾರಿ 35 ದಿನದ ಅವಧಿಯಲ್ಲಿ 2,57,25,859 ರೂಪಾಯಿ ನಗದು, 127 ಗ್ರಾಂ ಚಿನ್ನ ಹಾಗೂ 3.447 ಗ್ರಾಂ ಬೆಳ್ಳಿ ಸಂಗ್ರಹವಾಗಿತ್ತು.
ಎಣಿಕೆ ಸಂದರ್ಭದಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಎಸ್‍ಬಿಐ ಬ್ಯಾಂಕ್ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಇದ್ದರು.
ಕುಜ ದೋಷಕ್ಕೆ ಮಹಿಳಾ ಪೊಲೀಸ್ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ
ದಂತ ಚಿಕಿತ್ಸೆಗೆ ಹೋದ ಸ್ಯಾಂಡಲ್ವುಡ್ ನಟಿಯ ಮುಖವೇ ವಿರೂಪ! ವೈದ್ಯೆ ಎಡವಟ್ಟಿಗೆ ನಲುಗಿದ ನಟಿಯ ಕಷ್ಟ ಹೇಳತೀರದು