ವಿಧಾನಸೌಧದ ಶಾಸಕರ ಭವನದ 5ನೇ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

A man Committed suicide by MLA’s Bhavan Bangalo
ಬೆಂಗಳೂರು: ವಿಧಾನಸೌಧದ ಹಿಂಭಾಗದಲ್ಲಿರುವ ಶಾಸಕರ ಭವನದ 5ನೇ ಮಹಡಿಯಿಂದ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಂಗಳೂರಿನ ಮಾವಳ್ಳಿಯ ನಿವಾಸಿ ಶಿವಶಂಕರ್(44) ಆತ್ಮಹತ್ಯೆ ಮಾಡಿಕೊಂಡಾತ. ಶಿವಶಂಕರ್​ ಕೆಎಸ್​ಆರ್​ಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೊರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ತನಿಖೆಗೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)