ಹೆಂಡತಿಯನ್ನು ಕೊಂದು ಸ್ನೇಹಿತರಿಗೆ ವಿಡಿಯೋ ಕಾಲ್​ ಮಾಡಿದ ವ್ಯಕ್ತಿ! ಮುಂದಾಗಿದ್ದೇನು? | Video call

Untitled design - 2025-09-30T140102.970
Published on

Video call: ಟೆಕ್ಕಿಯೊಬ್ಬ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು, ಬಳಿಕ ತನ್ನ ಸ್ನೇಹಿತರಿಗೆ ವೀಡಿಯೊ ಸಂದೇಶ ಕಳುಹಿಸಿದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮ್​ದಲ್ಲಿ ಸೋಮವಾರ ನಡೆದಿದೆ.

ಅಜಯ್ ಕುಮಾರ್ (30) ಎಂದು ಗುರುತಿಸಲಾದ ಆರೋಪಿಯು ತನ್ನ ಪತ್ನಿ ಸ್ವೀಟಿ ಶರ್ಮಾ (28) ಜೊತೆಗಿನ ಜಗಳದ ನಂತರ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರೂ ಗುರುಗ್ರಾಮ್‌ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಸ್ನೇಹಿತರಿಗೆ ಕಳುಹಿಸಿದ ವೀಡಿಯೊ ಸಂದೇಶದಲ್ಲಿ ಅಜಯ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ. ಅಜಯ್ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನವರಾಗಿದ್ದರೆ, ಸ್ವೀಟಿ ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿಯಾಗಿದ್ದು, ಅವರು ಮೂರು ವರ್ಷಗಳ ಹಿಂದೆ ವಿವಾಹವಾದ್ದರು.

ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ವೀಟಿ ಕುಟುಂಬವು ಕೊಲೆ ಎಂದು ಆರೋಪಿಸಿ ದೂರು ದಾಖಲಿಸಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net