More

    10 ವರ್ಷ ಬಿಟ್ಟು ಕೆಆರ್‌ಎಸ್ ಡ್ಯಾಂ ಒಡೆದರೆ ಓಕೆನಾ?: ಸುಮಲತಾ

    ಮಂಡ್ಯ: ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿ, ಇದೀಗ ಆ ರೀತಿ ಹೇಳಿಯೇ ಇಲ್ಲ ಉಲ್ಟಾ ಒಡೆದ ಸಂಸದೆ ಸುಮಲತಾ, ಇಂದು ಮಧ್ಯಾಹ್ನ ಕೆಆರ್​ಎಸ್​ ಡ್ಯಾಂ ಪರಿಶೀಲನೆ ನಡೆಸಲು ಅಧಿಕಾರಿಗಳೊಂದಿಗೆ ಹೋಗಲಿದ್ದಾರೆ.

    ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಇನ್ನು 50 ವರ್ಷ ಬಿಟ್ಟು ಕೆಆರ್‌ಎಸ್ ಒಡೆದು ಹೋದ್ರೆ ಪರವಾಗಿಲ್ವ? ಎನ್ನುವಲ ಮೂಲಕ ಕೆಆರ್‌ಎಸ್ ಒಡೆಯುವ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದಾರೆ. ಕೆಆರ್‌ಎಸ್ ಸುತ್ತಮುತ್ತ ಆತಂಕದ ವಾತಾವರಣ ಇರುವ ಬಗ್ಗೆ ಎಲ್ಲೆಡೆ ವರದಿ ಆಗುತ್ತಿದೆ. ಈಗ ಏನೂ ಆಗಿಲ್ಲ ಅಂದ್ರೆ ಸರಿ. ಹಾಗಂತ ಇನ್ನು 10 ವರ್ಷ ಬಿಟ್ಟು ಕೆಆರ್‌ಎಸ್ ಡ್ಯಾಂ ಒಡೆದರೆ ಪರವಾಗಿಲ್ವ? 50 ವರ್ಷ ಬಿಟ್ಟು ಹೊಡೆದರೆ ಓಕೆನಾ? ಎಂದರು.

    ಕರೊನಾ ಬರುವ ಮುನ್ನ ಮಾಸ್ಕ್ ಹಾಕ್ಕೊಳ್ಳಿ, ಸ್ಯಾನಿಟೈಸ್ ಮಾಡ್ಕೊಳ್ಳಿ ಅಂತ ಹೇಳ್ತೀವಿ. ಅಂದ್ರೆ ನಮಗೆ ಕರೊನಾ ಬಂದಿದೆ ಅಂತ ಅರ್ಥನಾ? ಎಂದ ಸುಮಲತಾ, ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಎಂಬ ಮಾತಿಗೆ ಕೆ ಸಮರ್ಥನೆ ಕೊಟ್ಟಿಕೊಂಡರು.

    ಮಂಡ್ಯ ಜಿಲ್ಲೆಯ ಗಣಿ ಅಧಿಕಾರಿಗಳು ಕೂಡ ಏನೂ ಆಗಿಲ್ಲ ಎನ್ನುವಂತೆ ಮಾತನಾಡುತ್ತಾರೆ. ಅವರ ಮೇಲೆಯೂ ಒತ್ತಡಗಳು ಇರಬಹುದು. ಹೀಗಾಗಿ ಸ್ವತಂತ್ರವಾಗಿ ತನಿಖೆಯಾಗಬೇಕು. ರಾಜ್ಯದ ಅಧಿಕಾರಿಗಳಿಂದ ಸಾಧ್ಯವಾಗದಿದ್ದರೆ ಸಿಬಿಐ ತನಿಖೆ ಮಾಡಿಸಲಿ. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ 1200 ಕೋಟಿ ರೂ. ನಷ್ಟ ಆಗಿದೆ. ಇಷ್ಟು ರಾಜಧನ ವಸೂಲಿ ಮಾಡಿದ್ರೆ ಮಂಡ್ಯ ಅಭಿವೃದ್ಧಿಗೆ ಬಳಸಬಹುದಿತ್ತು. ಈಗ ಗಣಿಗಾರಿಕೆ ಇಲಾಖೆಯಲ್ಲಿ ಡ್ರೋಣ್ ಸರ್ವೆಗೆ 4-5 ಲಕ್ಷ ರೂ. ಕೂಡ ಇಲ್ಲ ಎನ್ನುತ್ತಿದ್ದಾರೆ. ನಾನು ಗಣಿ ಸಚಿವ ಮುರುಗೇಶ್ ನಿರಾಣಿಗೆ ಎಲ್ಲವನ್ನೂ ಹೇಳಿದ್ದೇನೆ. ಮೊದಲು ಅವರನ್ನು ಬೇಬಿ ಬೆಟ್ಟದ ಸುತ್ತಮುತ್ತಲಿನ ಗಣಿಗಾರಿಕೆ ಪ್ರದೇಶಕ್ಕೆ ಕರೆದುಕೊಂಡು ಬರುವೆ. ನಂತರ ವಸ್ತುಸ್ಥಿತಿ ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ತಿಳಿಸುವೆ ಎಂದರು.

    ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

    ಸರ್ಕಾರಿ ಶಾಲೆ ಶೌಚಗೃಹದಲ್ಲಿ ಯುವಕ ನೇಣಿಗೆ ಶರಣು! ಸಾವಿಗೂ ಮುನ್ನ ಮನದ ನೋವನ್ನು ಗೋಡೆ ಮೇಲೆ ಅಕ್ಷರಕ್ಕಿಳಿಸಿದ

    ಪ್ರಿಯಕರನ ಮನೆಯಲ್ಲಿ ಯುವತಿ ಶವ ಪತ್ತೆ! ಮೃತಳ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts