ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

love case
Published on

ಮಂಡ್ಯ: ಪ್ರೇಮ ಪ್ರಕರಣ ಸಂಬಂಧ 17 ವರ್ಷದ ಬಾಲಕನನ್ನು ಮನೆಗೆ ಕರೆಸಿಕೊಂಡ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಮಾರಣಾಂತಿಕ ಹಲ್ಲೆ ಮಾಡಿ ಆತನ ಸಾವಿಗೆ ಕಾರಣವಾದ ಘಟನೆ ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಸಂಭವಿಸಿದೆ.

ಕಲ್ಲಹಳ್ಳಿ ಬಡಾವಣೆಯ 17 ವರ್ಷದ ಬಾಲಕ ಮೃತ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗು ಕೊಲೆ ಆರೋಪಿ. ಇದೇ ಬಡಾವಣೆಯ ಶಿವಲಿಂಗು ಅವರ ಮಗಳನ್ನು ಬಾಲಕ ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದ ಬಾಲಕಿ ತಂದೆ, ನಿನ್ನೆ(ಬುಧವಾರ) ರಾತ್ರಿ ಮಗಳ ಪ್ರಿಯಕರನನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಈ ವೇಳೆ ಮನೆಯವರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದನ್ನೂ ಓದಿರಿ ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

ಗುರುವಾರ ಮುಂಜಾನೆ ಗಾಯಾಳು ಬಾಲಕನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾಗೆ ಕರೆದೊಯ್ಯಲಾಯಿತಾದರೂ ಆತ ಬದುಕಲಿಲ್ಲ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಲಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಆರೋಪಿ ಶಿವಲಿಂಗು ಬಂಧನಕ್ಕೆ ಆಗ್ರಹಿಸಿ ಮೃತನ ಸಂಬಂಧಿಕರು ಬಾಲಕಿ ಮನೆ ಎದುರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದರು. ಬಾಲಕ ಶವದೊಂದಿಗೆ ಪಶ್ಚಿಮ ಪೊಲೀಸ್ ಠಾಣೆ ಎದುರು ಧರಣಿ ಕೂರುವುದಾಗಿ ಎಚ್ಚರಿಸಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net