More

    ಮಂಡ್ಯದಲ್ಲಿ ಬ್ರಹ್ಮಚಾರಿಗಳ ಪಾದಯಾತ್ರೆ: ಎಂಗೇಜ್ಮೆಂಟ್ ಆದವರಿಗೂ ಅವಕಾಶವಿಲ್ಲ!

    ಮಂಡ್ಯ: ಜಿಲ್ಲೆಯಲ್ಲಿ ಎರಡು ದಿನದಿಂದ ಬ್ರಹ್ಮಚಾರಿಗಳ ಪಾದಯಾತ್ರೆ ಪೋಸ್ಟರ್ ಸಾಕಷ್ಟು ಸದ್ದು ಮಾಡುತ್ತಿದೆ. ‘ಬ್ರಹ್ಮಚಾರಿಗಳ ನಡೆ, ಮಲೆಮಹದೇಶ್ವರ ಬೆಟ್ಟದ ಕಡೆ’ ಹೆಸರಿನಲ್ಲಿ ಪಾದಯಾತ್ರೆ ಆಯೋಜಿಸಲಾಗಿದೆ.

    ಮದ್ದೂರು ತಾಲೂಕು ಕೆ.ಎಂ.ದೊಡ್ಡಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ 122 ಕಿ.ಮೀ. ಪಾದಯಾತ್ರೆ ಮಾಡುವುದಾಗಿ ಪೋಸ್ಟರ್‌ನಲ್ಲಿ ಹೇಳಲಾಗಿದೆ. ಮಳವಳ್ಳಿ-ಕೊಳ್ಳೆಗಾಲ-ಹನೂರು ಮಾರ್ಗವಾಗಿ ಪ್ರಯಾಣ ಸಾಗಲಿದೆ. ಇನ್ನು ಪಾದಯಾತ್ರೆಗೆ ಬರುವವರಿಗೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ. ಕಡ್ಡಾಯವಾಗಿ 30 ವರ್ಷ(ಆಧಾರ್ ಕಾರ್ಡ್​ನಲ್ಲಿ ನಮೂದಿಸಿರುವಂತೆ) ದಾಟಿರಬೇಕು. ಪಾದಯಾತ್ರೆಯಲ್ಲಿ ವಿವಾಹಿತರಿಗೆ ಅವಕಾಶವಿಲ್ಲ(ನಿಶ್ಚಿತಾರ್ಥ ಆಗಿದ್ದವರಿಗೂ ನಿಷೇಧ) ಎಂದು ಸೂಚನೆ ನೀಡಲಾಗಿದೆ. ಇದಲ್ಲದೆ ಪ್ರತಿ 5 ಕಿ.ಮೀ.ಗೆ ಚಹಾ ವಿರಾಮ ಹಾಗೂ ಪ್ರತಿ 10 ಕಿ.ಮೀ.ಗೆ ಸ್ನ್ಯಾಕ್ಸ್ ವ್ಯವಸ್ಥೆ ಇರಲಿದೆ. ರಾತ್ರಿ ವೇಳೆ ತಂಗುವ ಸ್ಥಳದಲ್ಲಿ ವಿಶೇಷ ಮನರಂಜನಾ ಕಾರ್ಯಕ್ರಮ ಇರುತ್ತದೆ. ಪಾದಯಾತ್ರೆ ಹೊರಡುವ ದಿನಾಂಕ ಮತ್ತು ರೂಪುರೇಷೆಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ತಿಳಿಸಲಾಗಿದೆ.

    ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡಂಗಿಲ್ಲ: ಜಮೀರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts