

ಮಂಡ್ಯ: ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮಂಡ್ಯ ತಹಸೀಲ್ದಾರ್ ಚಂದ್ರಶೇಖರ್ ಶಂ.ಗಾಳಿ ಅವರನ್ನು ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಲಂಚಕ್ಕೆ ಬೇಡಿಕೆ, ಅಕ್ಕಿ ಮೂಟೆಗಳ ನಾಪತ್ತೆ, ನಿಯಮ ಉಲ್ಲಂಘಿಸಿ ಮಗನ ಬರ್ತ್ ಡೇ ಆಚರಣೆ, ಕರ್ತವ್ಯ ಲೋಪ ಸೇರಿ 13 ಕಾರಣ ನೀಡಿ ತಹಸೀಲ್ದಾರ್ ಅವರನ್ನ ಕಂದಾಯ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಸ್.ರಶ್ಮಿ ಅಮಾನತು ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರತಿಯಲ್ಲಿ ಪ್ರಮುಖವಾಗಿ 13 ಅಂಶಗಳನ್ನು ಉಲ್ಲೇಖಿಸಲಾಗಿದೆ. ಜಿಲ್ಲಾಧಿಕಾರಿ ಎಸ್.ಅಶ್ವಥಿ ಮಾ.8ರಂದು ನೀಡಿದ್ದ ಪ್ರಸ್ತಾವನೆಯನ್ನು ಪರಿಗಣಿಸಲಾಗಿದೆ. ಚಂದ್ರಶೇಖರ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸಂಬಂಧ ದೋಷಾರೋಪಣಾ ಪಟ್ಟಿ ನೀಡಲಾಗಿದೆ.
ಅಮಾನತಿಗೆ ಪರಿಗಣಿಸಿರುವ ಅಂಶಗಳೇನು?
ಈ ಆರೋಪಗಳ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.