ವಿದ್ಯಾರ್ಥಿಗಳ ನಡುವೆ ಕಿಸ್ಸಿಂಗ್​ ಸ್ಪರ್ಧೆ! ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್

kissing
Published on

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಕಿಸ್ಸಿಂಗ್​ ಸ್ಪರ್ಧೆ ನಡೆದಿದೆ. ಖಾಸಗಿ ಕೊಠಡಿಯಲ್ಲಿ ಅಶ್ಲೀಲವಾಗಿ ತೊಡಗಿದ್ದಲ್ಲದೇ ಅದನ್ನ ವಿಡಿಯೋ ಮಾಡಿ ಸಾಮಾಜಿಕ ತಾಣದಲ್ಲೂ ಹರಿಯಬಿಡಲಾಗಿದೆ.

ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಇದಾಗಿದ್ದು, ಈ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ. ಕಾಲೇಜು ವಿದ್ಯಾರ್ಥಿಗಳ ಈ ಅಶ್ಲೀಲ ವಿಡಿಯೋ ಫುಲ್ ವೈರಲ್ ಆಗಿದ್ದು, ಕಾಲೇಜು ಯೂನಿಫಾರಂನಲ್ಲೇ ಇರುವ ಕಾರಣದಿಂದ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ.

ಕೆಲ ವಿದ್ಯಾರ್ಥಿಗಳ ಮಧ್ಯೆ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿ ಜತೆ ಅಶ್ಲೀಲವಾಗಿ ತೊಡಗಿಸಿಕೊಂಡ ವಿಡಿಯೋ ಇದಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದು ಕ್ರಮಕ್ಕೆ ಮುಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net