More

    ಮಸ್ಕಿ ಉಪ ಚುನಾವಣೆ: ಕಾಂಗ್ರೆಸ್​ನ ಬಸನಗೌಡ ತುರ್ವಿಹಾಳಗೆ ಗೆಲುವು, ಸೋಲುಂಡ ಬಿಜೆಪಿ

    ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 86,337 ಮತ ಪಡೆಯುವ ಮೂಲಕ ಬರೋಬ್ಬರಿ 30,606 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.

    ಏ.7ರಂದು ಮತದಾನ ನಡೆದಿತ್ತು. ಇಂದು ರಾಯಚೂರಿನ ಎಸ್​ಆರ್​ಪಿಎಸ್​ ಪಿಯು ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಮೊದಲ ಸುತ್ತಿನಲ್ಲೇ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್​, ಅಂತಿಮವಾಗಿ 86,222 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 55,731 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ. ಇದಕ್ಕೂ ಮುನ್ನವೇ ಅಂದರೆ ಮತ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಸೋಲೊಪ್ಪಿಕೊಂಡರು.

    ಕಳೆದ ಬಾರಿ ಬಿಜೆಪಿ ಉಮೇದುವಾರರಾಗಿ 213 ಮತಗಳ ಅಂತರದಿಂದ ಸೋತ ಬಸನಗೌಡ ತುರ್ವಿಹಾಳ ಈ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಸಮಸ್ತ ಅಧಿಕಾರಕ್ಕೆ ಬರಲು ಶಾಸಕ ಸ್ಥಾನ ತ್ಯಾಗ ಮಾಡಿದ್ದ ಪ್ರತಾಪಗೌಡ ಪಾಟೀಲ್​ನನ್ನು ಗೆಲ್ಲಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ರಣತಂತ್ರ ಹೆಣೆದಿತ್ತು. ಕೆ.ಆರ್​.ಪೇಟೆ ಹಾಗೂ ಶಿರಾ ಕ್ಷೇತ್ರಗಳ ತಂತ್ರಗಾರಿಕೆಯನ್ನೇ ಈ ತಂಡ ಇಲ್ಲಿಯೂ ಪ್ರಯೋಗಿಸಿತ್ತಾದರೂ ಮತದಾರರು ಕೈ ಹಿಡಿಯಲಿಲ್ಲ.

    ಮಸ್ಕಿ ಉಪ ಸಮರ: ಮತ‌ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್!

    ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

    ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts