More

    ಮಾಲ್​ನಲ್ಲಿ ಹೊತ್ತಿ ಉರಿದ ಬೆಂಕಿ: ಬೆಂಕಿ ನಂದಿಸಲು ಪ್ರಯತ್ನಿಸುತ್ತಿರುವ ಅಗ್ನಿ ಶಾಮಕ ದಳ

    ಥಾಣೆ: ಮಾಲ್​ ಒಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮುಂಬೈನ ಥಾಣೆಯಲ್ಲಿ ನಡೆದಿದೆ.

    ಇಂದು ಮಧ್ಯಾಹ್ನದ ಹೊತ್ತಿಗೆ ಥಾಣೆಯ ಕಪುರಬವ್ಡಿ ನಗರದಲ್ಲಿರುವ ಲೇಕ್​ ಮಾಲ್​ನ ಮೊದಲನೇ ಫ್ಲೋರ್​ನಲ್ಲಿ ಇದ್ದಕ್ಕಿದ್ದಂಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಈ ಮಾಲ್​ ಬಾಲ್ಕಮ್​ ಅಗ್ನಿ ಶಾಮಕ ಕೇಂದ್ರದ ಹತ್ತಿರವಿದ್ದು ಬೆಂಕಿ ಕಾಣಿಸಿಕೊಂಡಿರುವುದು ತಿಳಿದ ತಕ್ಷಣವೇ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಪ್ರಯತ್ನವನ್ನು ನಡೆಸುತ್ತಿದೆ.

    ಬೆಂಕಿ ಅನಾಹುತಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ ಎನ್ನುವುದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಗುಜರಾತ್​ನ ಅಹಮದಾಬಾದ್​ನ ನರೋಲ್​ ಎಂಬ ನಗರದಲ್ಲಿ ಬಟ್ಟೆ ಕಾರ್ಖಾನೆ ಹೊತ್ತಿ ಉರಿದಿದ್ದು ನಾಲ್ಕು ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts