

ಬೆಂಗಳೂರು: ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಕಾಲೇಜಿನಲ್ಲಿ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಲೋಕೇಂದ್ರನಾಥ್ ಕುಮಾರ್ ಸಿಂಗ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸೋಮವಾರ ಬೆಳಗ್ಗೆ ಪ್ರಯೋಗಿಕ ಪರೀಕ್ಷೆಗೆ ಹಾಜರಾದ ಬಳಿಕ ಮಧ್ಯಾಹ್ನ ಹಾಸ್ಟೆಲ್‌ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯ ರೂಂ ಲಾಕ್ ಮಾಡಿಕೊಂಡು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಸಂಬಂಧ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.